ಮೈಸೂರು: ‘ಜಿಲ್ಲೆಯಲ್ಲಿ 212 ಜನ ತೃತೀಯ ಲಿಂಗಿಗಳಿಗೆ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ (ಎಪಿಕ್) ಇಲ್ಲವೆಂಬ ಮಾಹಿತಿ ಇದೆ. ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತೃತೀಯ ಲಿಂಗಿಗಳಿಗೆ ಸೋಮವಾರ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
‘ಮತದಾರರ ಚೀಟಿಯಲ್ಲಿ ಹೆಸರು ಬದಲಾವಣೆಗೆ ಪೂರಕವಾದ ದಾಖಲೆಗಳು ಅಗತ್ಯ. ತಕ್ಷಣಕ್ಕೆ ಅದು ಸಾಧ್ಯವಿಲ್ಲ. ಹೆಸರು ಬದಲಾವಣೆಗೆ ನೋಟರಿ ಮಾಡಿಸಿ, ನ್ಯಾಯಾಲಯದಲ್ಲಿ ತಿದ್ದುಪಡಿ ಮಾಡಿಸಿ ನಂತರ ದಿನಪತ್ರಿಕೆಯಲ್ಲಿ ಪ್ರಕಟಿಸಬೇಕು. ವಯಸ್ಸಿನ ಬದಲಾವಣೆಗೆ ದಾಖಲೆಗಳು ಬೇಕು. ಪ್ರಸ್ತುತ ವಿಳಾಸ ಮತ್ತು ಲಿಂಗದ ನೋಂದಣಿ ಬದಲಾವಣೆ ಮಾಡಲಾಗುವುದು’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಕೃಷ್ಣಂರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.