ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಿಗ್ರಾಮ: ಭಾರಿ ಮಳೆಗೆ ಗೋಡೆ ಕುಸಿತ

Published 25 ಮೇ 2024, 4:38 IST
Last Updated 25 ಮೇ 2024, 4:38 IST
ಅಕ್ಷರ ಗಾತ್ರ

ಸಾಲಿಗ್ರಾಮ: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕರ್ಪೂರವಳ್ಳಿ ಗ್ರಾಮದ ಅನಸೂಯ ಅವರ ಮನೆ ಗೋಡೆ ಮಂಗಳವಾರ ರಾತ್ರಿ ಕುಸಿದು ಬಿದ್ದಿದೆ.

‘ಮನೆ ಗೋಡೆ ಸಂಪೂರ್ಣ ಕುಸಿದು ಬಿದ್ದಿದ್ದು, ವಾಸ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬಾಡಿಗೆ ಮನೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಅನಸೂಯ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ ಭಾವುಕರಾದರು.

ಗ್ರಾಮ ಆಡಳಿತಾಧಿಕಾರಿ ದರ್ಶನ್ ಮಾತನಾಡಿ, ‘ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT