ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ್ಡ್ ಚುನಾವಣೆ: ಸಂತೆ, ಜಾತ್ರೆ, ಉತ್ಸವ ಮುಂದೂಡಿಕೆ

Published 19 ಡಿಸೆಂಬರ್ 2023, 15:44 IST
Last Updated 19 ಡಿಸೆಂಬರ್ 2023, 15:44 IST
ಅಕ್ಷರ ಗಾತ್ರ

ನಂಜನಗೂಡು: ಇಲ್ಲಿನ ನಗರಸಭೆ ವ್ಯಾಪ್ತಿಯ 20ನೇ ವಾರ್ಡ್ ಉಪ ಚುನಾವಣೆ ಪ್ರಯುಕ್ತ ಡಿ.27ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ಮತದಾನ ಕಾರ್ಯವನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಮೈಸೂರು ಜಿಲ್ಲೆ ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ರೀತಿಯ ಸಂತೆ, ಜಾತ್ರೆ, ಉತ್ಸವಗಳನ್ನು ಮುಂದೂಡುವoತೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಮದ್ಯ ನಿಷೇಧ: ವಾರ್ಡಿನ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮತ್ತು ಶಾಂತಿಯುತವಾಗಿ ಮತದಾನ ನಡೆಸುವ ಸಂಬಂಧ ಮುನ್ನೆಚ್ಚರಿಕೆಯಿಂದ ನಂಜನಗೂಡು ನಗರ ವ್ಯಾಪ್ತಿಯಲ್ಲಿ ಡಿ.25ರ ಮಧ್ಯರಾತ್ರಿ 12ರಿಂದ 27ರ ಮಧ್ಯರಾತ್ರಿ 12ರವರೆಗೆ ಎಲ್ಲಾ ವಿಧದ ಮದ್ಯ ತಯಾರಿಕೆ, ಮಾರಾಟ, ಶೇಖರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆಯು ಡಿ.8ರಿಂದ ಡಿ.30ರವರೆಗೆ ಜಾರಿಯಲ್ಲಿರುವುದರಿಂದ ನಗರಸಭೆ ವ್ಯಾಪ್ತಿಯಲ್ಲಿ ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT