ಮೈಸೂರು: ತಾಲ್ಲೂಕಿನ ವರುಣ ಕೆರೆಯಲ್ಲಿ ಜಲ ಸಾಹಸ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಜಿಲ್ಲಾಡಳಿತ ಹಾಶಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಹಾಗೂ ಕಾವೇರಿ ನೀರಾವರಿ ನಿಗಮದಿಂದ ಕೆರೆಯ ಸಮಗ್ರ ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ, ಜಲಸಾಹಸ ಚಟುವಟಿಕೆಗಳು ಇರುವುದಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.

‘ಕೆರೆಯಲ್ಲಿನ ಹೂಳು ತೆರವು, ಬೇಲಿ ನಿರ್ಮಾಣ, ವಾಹನ ನಿಲುಗಡೆ ಪ್ರದೇಶ ಅಭಿವೃದ್ಧಿ, ಕೆರೆಗೆ ಸೇರುತ್ತಿರುವ ಕಲುಷಿತ ನೀರನ್ನು ವೈಜ್ಞಾನಿಕವಾಗಿ ಶುದ್ಧೀಕರಿಸಲು ನೈಸರ್ಗಿಕ ಜೈವಿಕ ವ್ಯವಸ್ಥೆ (ಎನ್ಬಿಎಸ್) ಅಳವಡಿಸಲು ಕ್ರಮ ವಹಿಸಲಾಗಿದೆ. ಈ ತಾಂತ್ರಿಕ ಕಾಮಗಾರಿಗಳನ್ನು ಸುಗಮವಾಗಿ ನಡೆಸಲು ಕೆರೆಯಲ್ಲಿನ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡುವುದು ಅಗತ್ಯವಾಗಿದೆ’ ಎಂದು ತಿಳಿಸಿದ್ದಾರೆ.

‘ಸಿವಿಲ್ ಕಾಮಗಾರಿಗಳು ಪೂರ್ಣಗೊಂಡ ನಂತರ ಜಲಸಾಹಸ ಚಟುವಟಿಕೆಗಳನ್ನು ಪುನರಾರಂಭಿಸಲಾಗುವುದು. ಕೆರೆಯನ್ನು ಮತ್ತಷ್ಟು ಆಕರ್ಷಕವಾಗಿಸಲು, ಪ್ರವಾಸಿಗರನ್ನು ಸೆಳೆಯಲು ಹಾಗೂ ಪರಿಸರ ಸ್ನೇಹಿಯಾಗಿ ರೂಪಿಸಲು ಈ ಅಭಿವೃದ್ಧಿ ಕ್ರಮವನ್ನು ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಈ ಕೆರೆಯಲ್ಲಿ ಮೆ:ಔಟ್ಬ್ಯಾಂಕ್ ಅಡ್ವೆಂಚರ್ಸ್ ವರುಣ ವರಿಯಿಂದ ಬೋಟಿಂಗ್ ಮೊದಲಾದ ಜಲ ಸಾಹಸ ಚಟುವಟಿಕೆಗಳನ್ನು ನಡೆಸಲಾಗುತ್ತಿತ್ತು. ರಜಾ ದಿನ, ವಾರಾಂತ್ಯದಲ್ಲಿ ಬಹಳಷ್ಟು ಜನರು ಬರುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.