ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಬೆಂಬಲಕ್ಕೆ ನೇಕಾರರ ಸಮಾವೇಶ 21ಕ್ಕೆ

Published 18 ಏಪ್ರಿಲ್ 2024, 14:57 IST
Last Updated 18 ಏಪ್ರಿಲ್ 2024, 14:57 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಮೈಸೂರು: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮತ್ತೊಮ್ಮೆ ಬೆಂಬಲ ನೀಡಲು ನೇಕಾರ ಸಮುದಾಯದಿಂದ ಏ. 21ರಂದು ಬೆಳಿಗ್ಗೆ 10.30ಕ್ಕೆ ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ’ ಎಂದು ಬಿಜೆಪಿ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ.ಎಸ್.ಸೋಮಶೇಖರ್ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮುದಾಯದ ಅಭಿವೃದ್ಧಿಗೆ ನೇಕಾರ ಸಮ್ಮಾನ್ ಯೋಜನೆ, ಅಭಿವೃದ್ಧಿ ನಿಗಮ, ನೇಕಾರ ಸಾಲಮನ್ನಾ ಯೋಜನೆ ಮೂಲಕ ಬಿಜೆಪಿ ಸರ್ಕಾರ ಕೆಲಸ ಮಾಡಿದೆ. ಪ್ರತಿ‌ ಜಿಲ್ಲೆಯಲ್ಲೂ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣದ ಆದೇಶವನ್ನೂ ಮಾಡಿದೆ’ ಎಂದರು.

‘ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹಾಗೂ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜ್ ಬೆಂಬಲಕ್ಕೆ ಸಮುದಾಯ ಸಜ್ಜಾಗಬೇಕು. ಎಲ್ಲರೂ ಸಮಾವೇಶಕ್ಕೆ ಆಗಮಿಸಿ ಬಿಜೆಪಿಗೆ ಶಕ್ತಿ ತುಂಬಬೇಕು’ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಸಿ.ಸತೀಶ್, ಜಿಲ್ಲಾ ಕಾರ್ಯದರ್ಶಿ ಚಲುವರಾಜು, ಪ್ರಕೋಷ್ಠ ರಾಜ್ಯ ಸದಸ್ಯ ಎಸ್.ಆರ್.ನಾಗಭೂಷಣ, ದೇವಾಂಗ ಸಂಘದ ಚಾಮರಾಜನಗರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಮೋಹನ್, ಪ್ರಮುಖರಾದ ಹೇಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT