ತಿ.ನರಸೀಪುರ : ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಕಾರ್ಮಿಕರ ವಸತಿ ಶಾಲೆ ನಿರ್ಮಾಣಕ್ಕೆ ನೀಡುವ ಪ್ರಸ್ತಾವವನ್ನು ಸರ್ಕಾರ ಹಿಂಪಡೆಯುವಂತೆ ಸಿಡಬ್ಲ್ಯುಎಫ್ಐ ರಾಜ್ಯ ಕಾರ್ಯಾಧ್ಯಕ್ಷ ಬಿ. ಉಮೇಶ್ ಒತ್ತಾಯಿಸಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ 2ನೇ ಸಮ್ಮೇಳನ, ಬಹಿರಂಗ ಸಭೆ, ಪ್ರತಿನಿಧಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಇತ್ತೀನ ಸಂಪುಟದಲ್ಲಿ ₹1125 ಕೋಟಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ಬಳಸಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿರುವ ಕ್ರಮವನ್ನು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ತೀವ್ರವಾಗಿ ವಿರೋಧಿಸಿದೆ . ಸರ್ಕಾರ ಈ ನಿರ್ಧಾರವನ್ನು ಹಿಂಪಡೆದು ನಿಧಿಯನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಬೇಕು. ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ. ಮೊದಲು ಅದನ್ನು ಸರ್ಕಾರ ಬಿಡುಗಡೆ ಮಾಡಬೇಕು ವಸತಿ ಶಾಲೆಯನ್ನು ಬೇರೆ ಯೋಜನೆಗಳ ಅನುದಾನದಲ್ಲಿ ನಿರ್ಮಾಣ ಮಾಡಲಿ ಎಂದು ಹೇಳಿದರು.

ಸಿಐಟಿಯು ಜಿಲ್ಲಾ ಸಮಿತಿ ಅಧ್ಯಕ್ಷ ಜಯರಾಮ್ ಮಾತನಾಡಿ, ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಜುಲೈ 9 ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿದೆ. ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಹಾಗೂ ಕೌಶಲ್ಯ ಕೇಂದ್ರ ಸ್ಥಾಪನೆ ನಿರ್ಧಾರ ವಿರೋಧಿಸಿ ಹೈಕೋರ್ಟ್ ತೀರ್ಪಿನಂತೆ ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ
ಜುಲೈ 9 ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರದಲ್ಲಿ ಒತ್ತಾಯಿಸಲಾಗುವುದು. ಕಾರ್ಮಿಕರ ನೀತಿ ವಿರುದ್ಧ ದೇಶವ್ಯಾಪಿ ನಡೆಯಲಿರುವ ಮುಷ್ಕರದಲ್ಲಿ ಭಾಗವಹಿಸಿ ಎಂದು ಕಾರ್ಮಿಕರಿಗೆ ಮನವಿ ಮಾಡಿದರು.

ಸಂಘಟನೆಯ ತಾಲ್ಲೂಕು ಸಮಿತಿ ಅಧ್ಯಕ್ಷ ನವೀನ್ ಕುಮಾರ್ ಸಿ. ಬಿ. ಮಾತನಾಡಿ ಕಾರ್ಮಿಕರ ಸಂಘಟನೆ, ಹೋರಾಟದ ಚಿಂತನೆಗಳ ಬಗ್ಗೆ ಪ್ರಸ್ತಾಪಿಸಿ ಮಕ್ಕಳ ಶೈಕ್ಷಣಿಕ ಧನ ಸಹಾಯ ಬಿಡುಗಡೆಗೆ ಒತ್ತಾಯಿಸಿದರು. ತಾಲ್ಲೂಕು ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಿ.ಬಿ. ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಕೆ ಸಿ, ಖಜಾಂಚಿ ಯಾಗಿ ಮಲ್ಲೇಶ್ ಎಂ., ಗೌರವಾಧ್ಯಕ್ಷರಾಗಿ ಶಿವಲಿಂಗಶೆಟ್ಟಿ, ಉಪಾಧ್ಯಕ್ಷರಾಗಿ ಬಸವರಾಜ್, ಸಹ ಕಾರ್ಯದರ್ಶಿಯಾಗಿ ಶಶಿಕಲಾ ಸಿದ್ದರಾಜು, ಸಹ ಖಜಾಂಚಿ ಶಿವಕುಮಾರ್ ಆಯ್ಕೆ ಮಾಡಲಾಯಿತು

ತಾಲ್ಲೂಕು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಅಂಬೇಡ್ಕರ್ ಭವನದವರೆಗೆ ಜಾಥಾ ನಡೆಸಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಸುಶೀಲ, ಕಟ್ಟಡ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಹೆಚ್.ಎಂ ಬಸವಯ್ಯ ಜಿಲ್ಲಾ ಖಜಾಂಚಿ ವಿ ಸೋಮಶೇಖರ್ ಸಿಐಟಿಯು ತಾಲ್ಲೂಕು ಉಸ್ತುವಾರಿ ಶಶಿಕುಮಾರ್ ಕಾರ್ಮಿಕ ಮುಖಂಡರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.