ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಸೋಮವಾರ ಹಾಡಹಗಲೆ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಇಲ್ಲಿನ ಬ್ರಾಹ್ಮಣರ ಬೀದಿಯಲ್ಲಿ ವಾಸವಿದ್ದ ಕಲಾವತಿ ಕೊಲೆಯಾದವರು. ಇವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ದರೋಡೆ ಮಾಡಲೆಂದು ಬಂದ ದರೋಡೆಕೋರರ ಗುಂಪಿನಿಂದ ಈ ಕೃತ್ಯ ನಡೆದಿದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಭಾನುವಾರ ನಸುಕಿನಲ್ಲಿ ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಕೋರರು ಕಾರು ಮತ್ತು ಬೈಕ್ನ್ನು ದರೋಡೆ ಮಾಡಿದ್ದರು. ಶನಿವಾರ ರಾತ್ರಿ ಕೆ.ಆರ್.ನಗರದಲ್ಲಿ ಕಾರನ್ನು ತಡೆದ ದರೋಡೆಕೋರರು ಚಾಲಕನ ಮೇಲೆ ಹಲ್ಲೆ ನಡೆಸಿ ನಗದು ದೋಚಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.