ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲುಷಿತ ನೀರು ಕುಡಿದು ಮೃತಪಟ್ಟ ವ್ಯಕ್ತಿಯ ಸಹೋದರಗೆ ಕೆಲಸ: ಸಿಎಂ ಭರವಸೆ

Published 23 ಮೇ 2024, 15:36 IST
Last Updated 23 ಮೇ 2024, 15:36 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲ್ಲೂಕಿನ‌ ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ, ಕಲುಷಿತ ನೀರು ಕುಡಿದು ಮೃತಪಟ್ಟ ಕನಕರಾಜು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ ನಗದು ಪರಿಹಾರ ನೀಡಿದರು.

ಸರ್ಕಾರದಿಂದ ₹ 5 ಲಕ್ಷ ಪರಿಹಾರ‌ ನೀಡಲಾಗುವುದು. ಮೃತ ಕಾಂತರಾಜು ಅವರ ಸಹೋದರ ರವಿಗೆ ಕೆಲಸ ಕೊಡಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ‌.ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಬಿ.ಎಸ್.‌ಸುರೇಶ್, ಮುಡಾ ಅಧ್ಯಕ್ಷ ಕೆ.ಮರೀಗೌಡ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT