ಮೈಸೂರು: ‘ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಹೆಸರಾಂತ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹಂಪನಾ ಅವರಿಗೆ ಶೀಘ್ರದಲ್ಲೇ ಅಧಿಕೃತ ಆಹ್ವಾನ ಕೊಡಲಾಗುವುದು. ಈಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಉದ್ಘಾಟಕರ ಆಯ್ಕೆಯನ್ನು ನನ್ನ ವಿವೇಚನೆಗೆ ಬಿಟ್ಟಿದ್ದರು’ ಎಂದು ಹೇಳಿದರು.
ಈ ಬಾರಿಯ ದಸರಾ ಮಹೋತ್ಸವವು ಅ.3ರಿಂದ ನಡೆಯಲಿದೆ. 3ರಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ.