ಮೈಸೂರು: ‘ಮೈಸೂರು ಮಹಾನಗರಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ. ಉತ್ತರದಾಯಿತ್ವ ಇಲ್ಲದಿರುವುದರಿಂದಾಗಿ ಅಕ್ರಮಗಳ ಸಂಖ್ಯೆ ಏರಿಕೆಯಾಗಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಸಂಪೂರ್ಣ ಹೊಣೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಪಾಲಿಕೆಯಲ್ಲಿ ಸಾರ್ವಜನಿಕ ನಿಧಿಯನ್ನೇ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮೂವರು ಮಹಿಳಾ ಸಿಬ್ಬಂದಿಯನ್ನು ಅಮಾನತು ಮಾಡಿರುವುದೇ ಇದಕ್ಕೆ ಸಾಕ್ಷಿ’ ಎಂದು ಹೇಳಿದ್ದಾರೆ.

‘ಚುನಾಯಿತ ಜನಪ್ರತಿನಿಧಿಗಳು ಇಲ್ಲದಿರುವುದು, ಸಮರ್ಥ ಮೇಲ್ವಿಚಾರಣೆ ಮಾಡದಿರುವುದು, ಸುಧಾರಣೆ ಕ್ರಮಗಳನ್ನು ಕೈಗೊಳ್ಳದಿರುವುದು, ಉತ್ತರದಾಯಿತ್ವ ಇರದಿರುವುದು ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ’ ಎಂದು ದೂರಿದ್ದಾರೆ.

‘ಕಾಂಗ್ರೆಸ್ ಸರ್ಕಾರವು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದೇ ವಿಳಂಬ ಧೋರಣೆ ತೋರುತ್ತಿರುವುದು ಎಲ್ಲದ್ದಕ್ಕೂ ಕಾರಣವಾಗಿದೆ. ಸ್ಥಳೀಯ ಪ್ರಜಾಪ್ರಭುತ್ವ ಹಾದಿ ತಪ್ಪಿದ್ದರಿಂದ ಭ್ರಷ್ಟಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಒಟ್ಟಾರೆ ಎಲ್ಲ ಪ್ರಕರಣಗಳಿಗೂ ಕಾಂಗ್ರೆಸ್ ಸರ್ಕಾರವೇ ಸಂಪೂರ್ಣ ಜವಾಬ್ದಾರಿಯಾಗಿದೆ’ ಎಂದು ಆರೋಪಿಸಿದ್ದಾರೆ.

‘ಬೃಹತ್ ಮೈಸೂರು ಮಹಾನಗರಪಾಲಿಕೆ ಮಾಡುತ್ತೇವೆ ಎಂದು ಹೊರಟಿರುವ ಕಾಂಗ್ರೆಸ್ ಸರ್ಕಾರ, ಅದನ್ನು ಮಾಡದಿದ್ದರೂ ಪರವಾಗಿಲ್ಲ. ನಗರಪಾಲಿಕೆಯಲ್ಲಿ ಗ್ರೇಟರ್ ಸುಧಾರಣೆಗಳನ್ನು ತಂದರೆ ಸಾಕಾಗಿದೆ’ ಎಂದು ಯದುವೀರ್ ಹೇಳಿದ್ದಾರೆ.