ಮೈಸೂರು: ‘ನಮ್ಮ ಮೈಸೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ದೀರ್ಘಕಾಲದಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳಿಗೂ ಚಾಲನೆ ನೀಡಲಾಗುತ್ತದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ರೈಲ್ವೆ ಇಲಾಖೆ ಪ್ರಧಾನ ವ್ಯವಸ್ಥಾಪಕರೊಂದಿಗೆ ಇಲ್ಲಿ ಸೋಮವಾರ ಸಮಾಲೋಚನೆ ನಡೆಸಿದ್ದು, ಹಲವು ಕಾಮಗಾರಿಗೆ ಅನುಮೋದನೆಗಳನ್ನು ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೈಸೂರು, ಬನ್ನಿಮಂಟಪ ಕಡೆಗೆ ಬರುವಾಗ ಫ್ಲೈ ಓವರ್ ನಿರ್ಮಿಸಲಾಗುತ್ತದೆ. ಬನ್ನಿಮಂಟಪ, ಇದಲ್ಲದೇ ಸರ್ವೀಸ್ ರಸ್ತೆ (ಸ್ಲಿಪ್ ರೋಡ್)ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ. ವರ್ತುಲ ರಸ್ತೆಯ ಮಣಿಪಾಲ್ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಅಂಡರ್ ಪಾಸ್ ನಿರ್ಮಿಸುವ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಈಗಾಗಲೇ ಯೋಜನೆ ಅರಂಭಕ್ಕೆ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಮುಂದಿನ ಮೂರು ತಿಂಗಳಿನಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಿ, ಅತಿ ಶೀಘ್ರದಲ್ಲೇ ಸಾರ್ವಜನಿಕ ಸೇವೆಗೆ ಒದಗಿಸುವುದೇ ನಮ್ಮ ಮುಖ್ಯ ಗುರಿಯಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಮೈಸೂರಿನಲ್ಲಿ ಉತ್ತಮ ಸೇವಾ ಸೌಲಭ್ಯಗಳನ್ನು ಕಲ್ಪಿಸಲು, ಅಭಿವೃದ್ಧಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ನೆರವು ನೀಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಮ್ಮ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಎಲ್ಲರ ಸಹಕಾರ ಅಗತ್ಯ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.