ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಸ್ವಚ್ಛತೆ: ಪತ್ನಿ ಜೊತೆ ಯದುವೀರ್ ಶ್ರಮದಾನ

Published 15 ಏಪ್ರಿಲ್ 2024, 16:36 IST
Last Updated 15 ಏಪ್ರಿಲ್ 2024, 16:36 IST
ಅಕ್ಷರ ಗಾತ್ರ

ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪತ್ನಿ ತ್ರಿಷಿಕಾ ಅವರೊಂದಿಗೆ ಸೋಮವಾರ ಸ್ವಚ್ಛತಾ ಕಾರ್ಯದಲ್ಲಿ ಶ್ರಮದಾನ ಮಾಡಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ವೇಳೆ ಬಿದ್ದಿದ್ದ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯದಲ್ಲಿ ನಗರಪಾಲಿಕೆಯ ಪೌರಕಾರ್ಮಿಕರು ಹಾಗೂ ಸ್ವಯಂಸೇವಕರು ಜತೆ ಕೈಜೋಡಿಸಿದರು.

ಥಾರ್‌ ಕಾರನ್ನು ಚಲಾಯಿಸಿಕೊಂಡು ಪತ್ನಿ ಜೊತೆ ಮೈದಾನಕ್ಕೆ ಬಂದ ಅವರು, ಮಾಸ್ಕ್‌ ಹಾಗೂ ಕೈಗವಸು ತೊಟ್ಟು ಕೆಲ ಹೊತ್ತು ತ್ಯಾಜ್ಯ ಸಂಗ್ರಹಿಸುವ ಕಾರ್ಯದಲ್ಲಿ ಭಾಗಿಯಾದರು. ಸ್ವಚ್ಛತಾ ಸೇನಾನಿಗಳಾದ ಪೌರಕಾರ್ಮಿಕ ಕಾರ್ಯವನ್ನು ಶ್ಲಾಘಿಸಿದರು.

‘ನಗರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಇದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನವನ್ನು ಜಾರಿಗೊಳಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT