ಮೈಸೂರು: ‘ ರಾಜ್ಯ ಸರ್ಕಾರವು ಪ್ರತಿ ಕೆಲಸಕ್ಕೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೂರಿದರು.

ಇಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ ತಂಬಾಕಿಗೆ ಸೂಕ್ತ ಬೆಲೆ ನೀಡಬೇಕು ಎನ್ನುವುದು ರೈತರ ಬೇಡಿಕೆ. ತಂಬಾಕು ಬೆಲೆ ಸಮಸ್ಯೆಯನ್ನು ಕೇಂದ್ರ ಸರ್ಕಾರವೇ ಬಗೆಹರಿಸುತ್ತದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ಬಗ್ಗೆ ಏನು ಹೇಳಿಲ್ಲ’ ಎಂದರು.

‘ಯೋಜನೆಗಳಿಗೆ ಭೂಮಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವಂದ್ವ ನಿಲುವು ಅನುಸರಿಸುತ್ತಿದೆ. ಎಚ್ಎಂಟಿ ಕಾರ್ಖಾನೆ ಅಭಿವೃದ್ಧಿಗೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಮುಂದಾದಾಗ ರಾಜ್ಯ ಸರ್ಕಾರವು ಮರಗಳ ಹೆಸರಿನಲ್ಲಿ ವಿರೋಧ ಮಾಡಿತ್ತು. ಆದರೆ ತಿ. ನರಸೀಪುರದಲ್ಲಿ ಕೆಎಸ್ಐಸಿ ಜಾಗದಲ್ಲಿ ಸಾಕಷ್ಟು ಮರಗಿಡಗಳಿದ್ದರೂ ಕ್ರೀಡಾಂಗಣ ನಿರ್ಮಾಣಕ್ಕೆ ನೀಡಿದೆ. ಈ ಜಾಗವನ್ನು ಕೆಎಸ್ಐಸಿ ಅಭಿವೃದ್ಧಿಗೇ ಬಳಸಬೇಕು. ಇದಕ್ಕಾಗಿ ಹೋರಾಟ ಮಾಡುತ್ತೇವೆ’ ಎಂದರು.

'ಮುಖ್ಯಮಂತ್ರಿ ಕುರ್ಚಿಗಾಗಿ ಕಾದಾಟ ಕಾಂಗ್ರೆಸ್ನ ಆಂತರಿಕ ವಿಚಾರ. ಆದರೆ ಅದರಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಆಗಿದೆ’ ಎಂದು ಯದುವೀರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.