ಮೈಸೂರು: ‘ನಗರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಕಳವಳಕಾರಿಯಾಗಿವೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

‘ಈ ಹಿಂದೆ ಬಂಧಿತನಾಗಿದ್ದ ಆರೋಪಿಯೊಬ್ಬ ನೀಡಿದ ಮಾಹಿತಿಯ ಮೇರೆಗೆ ಮಾದಕದ್ರವ್ಯ ನಿಯಂತ್ರಣ ಮಂಡಳಿ (ಎನ್ಸಿಬಿ) ಬುಧವಾರ ಮೈಸೂರಿನಲ್ಲಿ ಮತ್ತೊಮ್ಮೆ ದಾಳಿ ನಡೆಸಿದೆ. ಅಲ್ಲಿ ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗದಿದ್ದರೂ ಈ ಬೆಳವಣಿಗೆಯು ಆತಂಕಕಾರಿಯಾಗಿದೆ’ ಎಂದಿದ್ದಾರೆ.

‘ಮಾದಕ ದ್ರವ್ಯ ಜಾಲದ ತನಿಖೆಗಳು ಪದೇ ಪದೇ ಮೈಸೂರಿನತ್ತಲೇ ಬೆರಳು ತೋರಿಸುತ್ತಿವೆ. ಸಂಸ್ಕೃತಿ ಮತ್ತು ಪರಂಪರೆಗೆ ಹೆಸರಾಗಿದ್ದ ನಗರವು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮಾದಕ ದ್ರವ್ಯ ತನಿಖೆಗಳಿಂದಾಗಿ ಅಪಖ್ಯಾತಿ ಪಡೆಯುವಂತಾಗಿದೆ. ಇದು ಕೇವಲ ಕಾಕತಾಳೀಯವಲ್ಲ; ಹದಗೆಡುತ್ತಿರುವ ಕಾನೂನು– ಸುವ್ಯವಸ್ಥೆ ಮತ್ತು ದುರ್ಬಲ ಆಡಳಿತದ ನೇರ ಫಲಿತಾಂಶವಾಗಿದೆ’ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.