ಮೈಸೂರು: ‘ಜನರ ಸಮಸ್ಯೆಗಳನ್ನು ಕೇಳುವುದಷ್ಟೆ ನನ್ನ ಕರ್ತವ್ಯವಲ್ಲ. ಅವುಗಳಿಗೆ ಪರಿಹಾರ ಒದಗಿಸುವುದು ಹೊಣೆಗಾರಿಕೆಯನ್ನೂ ನಿರ್ವಹಿಸುವೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರವಸೆ ನೀಡಿದರು.

ತಾಲ್ಲೂಕಿನ ನಾಗನಹಳ್ಳಿಯಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ನಾಗರಿಕರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

‘ರಸ್ತೆ, ಕುಡಿಯುವ ನೀರು, ಒಳಚರಂಡಿ, ವಿದ್ಯುತ್, ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಸಂಬಂಧಿಸಿದಂತೆ ಹಲವು ಅಹವಾಲುಗಳು ಬಂದಿವೆ. ಅವುಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಕಾಲಮಿತಿಯೊಳಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘ಜನರ ವಿಶ್ವಾಸವೇ ನನ್ನ ಸಾರ್ವಜನಿಕ ಜೀವನದ ಶಕ್ತಿ’ ಎಂದ ಅವರು, ‘ಪ್ರತಿ ಸಮಸ್ಯೆಯನ್ನೂ ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ತಿಳಿಸಿದರು.

ಖುದ್ದಾಗಿ ತಿಳಿಯಲು: ‘ಇಂತಹ ಸಭೆಗಳ ಮೂಲಕ ಜನರೊಂದಿಗೆ ನಂಟು ಬೆಳೆಯಲು ಹಾಗೂ ಅವರ ಸಮಸ್ಯೆಗಳನ್ನು ಖುದ್ದಾಗಿ ತಿಳಿಯಲು ಅನುಕೂಲ ಆಗುತ್ತದೆ. ಪ್ರತಿ ಪಂಚಾಯಿತಿಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುವುದಲ್ಲದೆ ಅವುಗಳನ್ನು ತ್ವರಿತವಾಗಿ ಪರಿಹರಿಸಲು ಆದ್ಯತೆ ನೀಡುತ್ತೇವೆ. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳಿಗೆ ತಿಳಿಸಿ ಪರಿಹಾರ ದೊರಕಿಸಿಕೊಟ್ಟಿದ್ದೇವೆ’ ಎಂದರು.

‘ನಾಗರಿಕರು ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದಾಗಲೂ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಗತ್ಯವಿದ್ದರೆ ನಾನೇ ಇಲಾಖೆ ಅಥವಾ ಕಚೇರಿಗಳಿಗೆ ಭೇಟಿ ನೀಡಿ ಅರ್ಜಿಗಳು ಏನಾಗಿವೆ ಎಂಬುದನ್ನು ಪರಿಶೀಲಿಸುತ್ತೇನೆ’ ಎಂದು ತಿಳಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಜನರನ್ನು ಸಂಪೂರ್ಣ ನಿರ್ಲಕ್ಷಿಸಿರುವುದು ಸ್ಪಷ್ಟವಾಗಿದೆ. ಹೀಗಾಗಿ ಜನರ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿ ನನ್ನ ಮೇಲಿದೆ. ಇನ್ಮುಂದೆ ಈ ರೀತಿಯ ಜನಸಂಪರ್ಕ ಸಭೆಗಳನ್ನು ಹೆಚ್ಚಾಗಿ ಆಯೋಜಿಸಲಾಗುವುದು’ ಎಂದು ಹೇಳಿದರು.

ಕೊನೆಯವರೆಗೂ ತಲುಪಬೇಕು: ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ‘ಸರ್ಕಾರದ ಯೋಜನೆಗಳು ಕೊನೆಯ ವ್ಯಕ್ತಿಯವರೆಗೂ ತಲುಪಬೇಕೆಂಬುದೇ ಪಕ್ಷದ ಗುರಿಯಾಗಿದೆ. ಜನರ ಸಮಸ್ಯೆಗಳನ್ನು ಕೇಳಿ, ಅವುಗಳಿಗೆ ಪರಿಹಾರ ಒದಗಿಸುವಲ್ಲಿ ಪಕ್ಷ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ’ ಎಂದು ಹೇಳಿದರು.

‘ಜನಸಂಪರ್ಕ ಸಭೆಗಳು ಜನರ ಬದುಕಿನ ವಾಸ್ತವ ಚಿತ್ರಣವನ್ನು ಅರಿಯುವ ವೇದಿಕೆಗಳಾಗಬೇಕು’ ಎಂದರು.

ಪಕ್ಷದ ಚಾಮುಂಡೇಶ್ವರಿ ಮಂಡಲದ ಅದ್ಯಕ್ಷ ಪೈಲ್ವಾನ್ ಟಿ.ರವಿ ಲಕ್ಷೀಪುರ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಂತರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ.ರಘು, ಸಿ.ಕೆ ರುದ್ರಮೂರ್ತಿ, ಕಾರ್ಯದರ್ಶಿ ಮರಿಸ್ವಾಮಿನಾಯಕ, ಮುಖಂಡರಾದ ಎಸ್.ಅರ್.ಗೋಪಾಲ್ರಾವ್, ಜಗದೀಶ್ ಗೌಡ, ಹೇಮಂತ್ಕುಮಾರ್ ಗೌಡ, ರಾಜಕುಮಾರ್, ನಂಜುಂಡಸ್ವಾಮಿ, ಸುನೀಲ್, ಶರತ್, ವೀರಭದ್ರಸ್ವಾಮಿ, ಎನ್.ಎಸ್. ರಮೇಶ್, ದಿನೇಶ್, ಭಾಸ್ಕರ್, ಕೃಷ್ಣಕುಮಾರ್, ನಟರಾಜು, ಯಜಮಾನ್ ಮಹದೇವಪ್ಪ, ಶಂಕರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.