ಮೈಸೂರು: ‘ನಾನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅವಮಾನ ಮಾಡುವ ಉದ್ದೇಶದಿಂದ ಮಾತನಾಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಇಲ್ಲಿ ಭಾನುವಾರ ಪತ್ರಕರ್ತರಿಗೆ ಪ್ರತಿಕ್ರಿಯಿಸಿದ ಅವರು, ‘ಮೈಸೂರು ಸೇರಿದಂತೆ ಇಡೀ ರಾಜ್ಯಕ್ಕೆ ನಾಲ್ವಡಿ ಒಡೆಯರ್ ಕೊಟ್ಟ ಕೊಡುಗೆಗಳು ಬಹಳಷ್ಟಿದೆ. ಅವರನ್ನು ಕಮ್ಮಿ ಮಾಡಿ ನಮ್ಮ ಸರ್ಕಾರ ಜಾಸ್ತಿ ಮಾಡಿದೆ ಎಂದು ಹೇಳಿಲ್ಲ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ಮೈಸೂರಿಗೆ ಅತಿ ಹೆಚ್ಚು ಅನುದಾನ ಕೊಟ್ಟಿರುವುದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ನಮ್ಮ ತಂದೆ ಕೊಟ್ಟಷ್ಟು ಅನುದಾನವನ್ನು ಇನ್ಯಾವ ಮುಖ್ಯಮಂತ್ರಿಗಳೂ ಕೊಟ್ಟಿಲ್ಲ. ಈ ಬಗ್ಗೆ ಕ್ಷಮೆಯಾಚಿಸುವ ಪ್ರಮೇಯವೇ ಇಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.