ಮೈಸೂರು: ‘ಕಾಂಗ್ರೆಸ್ನಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ನಾನು ಹೇಳಿದ್ದರಲ್ಲಿ ತಪ್ಪೇನಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡರು.
.ಸುದ್ದಿ ವಿಶ್ಲೇಷಣೆ | ಯತೀಂದ್ರ ದಾಳ: ಯಾರಿಗೆಲ್ಲ ‘ಗಾಳ’.
ಶನಿವಾರ ಇಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿಯಾಗಿದೆ. ಅನಗತ್ಯವಾಗಿ ಮತ್ತೆ ಅದನ್ನೇ ಮಾತನಾಡಿ ವಿವಾದ ಸೃಷ್ಟಿ ಮಾಡುವುದಿಲ್ಲ. ಮಾಧ್ಯಮದ ಮುಂದೆ ಮತ್ತೆ ಏನೂ ಮಾತನಾಡುವುದಿಲ್ಲ. ಈ ವಿಚಾರದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ಒಳಗೆ ಮಾತನಾಡುತ್ತೇನೆ’ ಎಂದರು.

‘ಈ ವಿಚಾರವಾಗಿ ಪಕ್ಷದಿಂದ ನೋಟಿಸ್ ಬಂದಾಗ ನೋಡಿಕೊಳ್ಳೋಣ ಬಿಡಿ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
.ಯತೀಂದ್ರ ಅವರದ್ದು ಎಳಸು ಹೇಳಿಕೆ, ಇತಿಮಿತಿ ಅರಿತು ಮಾತನಾಡಲಿ: ಇಕ್ಬಾಲ್ ಹುಸೇನ್.
‘ ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ. ಕೇವಲ ಊಹಾಪೋಹ ಅಷ್ಟೇ’ ಎಂದರು.
.ತಂದೆ ರಾಜಕೀಯದ ಸಂಧ್ಯಾಕಾಲದಲ್ಲಿದ್ದಾರೆ: ಯತೀಂದ್ರ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.