ಮೈಸೂರು: ‘ನನ್ನನ್ನು ಸರ್ಕಾರವು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಜಿಲ್ಲಾ ಸಮಿತಿಗೆ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಮತ್ತು ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ವರುಣ ಕ್ಷೇತ್ರದ ಜನರ ಸಮಸ್ಯೆ ಆಲಿಸುತ್ತೇನೆ. ನೇಮಕದ ಬಗ್ಗೆ ಕೆಲವು ದಿನಗಳ ಹಿಂದೆಯೇ ಆದೇಶವಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.