ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಣ ಕ್ಷೇತ್ರಕ್ಕೆ ಅನುದಾನ ನೀಡಿ: ಯತೀಂದ್ರ ಸಿದ್ದರಾಮಯ್ಯ

Published : 25 ಆಗಸ್ಟ್ 2024, 14:37 IST
Last Updated : 25 ಆಗಸ್ಟ್ 2024, 14:37 IST
ಫಾಲೋ ಮಾಡಿ
Comments

ಮೈಸೂರು: ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಒತ್ತಾಯಿಸಿದರು.

ವರುಣಾ ಕ್ಷೇತ್ರದ ಲಲಿತಾದ್ರಿಪುರದಲ್ಲಿ ಸರ್ಕಾರಿ ಪ್ರೌಢ ಶಾಲಾ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ಲಲಿತಾದ್ರಿಪುರದಲ್ಲಿ ಸುಮಾರು 4ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದು, ಇಲ್ಲಿನ ಮಕ್ಕಳು ಪ್ರೌಢಶಾಲೆಗೆ ಬೇರೆಡೆಗೆ ಹೋಗಬೇಕಾಗಿತ್ತು. ನಾನು ಶಾಸಕನಾಗಿದ್ದಾಗ ಬಿಜೆಪಿ ಸರ್ಕಾರಕ್ಕೆ ಪ್ರೌಢಶಾಲೆ ಮಂಜೂರು ಮಾಡಬೇಕೆಂದು ಮನವಿ ಮಾಡಿದ್ದರೂ ಆಗಿರಲಿಲ್ಲ. ಈಗ ನಮ್ಮದೇ ಸರ್ಕಾರವಿದ್ದು, ಸಿದ್ದರಾಮಯ್ಯನವರೆ ಸಿಎಂ ಆಗಿರುವುದರಿಂದ ಪ್ರೌಢಶಾಲೆ ಮಂಜೂರು ಮಾಡಿದ್ದಾರೆ’ ಎಂದು ತಿಳಿಸಿದರು.

‘9ನೇ ತರಗತಿಗೆ 27ಮಕ್ಕಳು ದಾಖಲಾಗಿದ್ದಾರೆ. ₹14 ಲಕ್ಷ ವೆಚ್ಚಮಾಡಿ ಈ ಕಟ್ಟಡ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ₹30 ಕೋಟಿ ನೀಡಿದ್ದರು. ಅದನ್ನೆಲ್ಲಾ ಶಾಲೆಗಳ ದುರಸ್ತಿ, ಹೊಸಕಟ್ಟಡ ನಿರ್ಮಾಣಕ್ಕೆ ಖರ್ಚು ಮಾಡಲಾಗಿದೆ’ ಎಂದರು.

ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ, ಶಿಕ್ಷಣದಿಂದ ಮಾತ್ರ ಸಾಧ್ಯ. ಭಾರತದಲ್ಲಿ ಶಿಕ್ಷಣ ಪಡೆದ ಮಕ್ಕಳು ಪ್ರಪಂಚದಾದ್ಯಂತ ಕೆಲಸ ಮಾಡುತ್ತಿದಾರೆ. ಆದ್ದರಿಂದ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಶಿಕ್ಷಕರು, ಗ್ರಾಮಸ್ಥರು ನೋಡಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಕೆ.ಎನ್.ವಿಜಯ್, ಡಿಡಿಪಿಐ ಜವರೇಗೌಡ, ಬಿಇಒ ವಿವೇಕಾಂದ, ಎಸ್‌ಡಿಎಂಸಿ ಅಧ್ಯಕ್ಷ ನಾಗೇಂದ್ರ, ಮುಖ್ಯ ಶಿಕ್ಷಕಿ ಕಮಲಾಕ್ಷಿ, ಶಿಕ್ಷಕಿ ಪವಿತ್ರಾ, ಮುಖಂಡರಾದ ಸಕಳ್ಳಿ ಬಸವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಬಂಡಿಪಾಳ್ಯ ಬಸವರಾಜು, ರಮೇಶ್ ಮುದ್ದೇಗೌಡ, ಮಂಜುಳಾ ಮಂಜುನಾಥ್, ತಾ.ಪಂ ಮಾಜಿ ಸದಸ್ಯರಾದ ಎಂ.ಟಿ.ರವಿಕುಮಾರ್, ಜಿ.ಕೆ.ಬಸವಣ್ಣ, ಸಿದ್ದಯ್ಯ, ಶಾಂತಮ್ಮ, ದಕ್ಷಿಣಾಮೂರ್ತಿ, ಅಭಿ, ಶಿವಸ್ವಾಮಿ, ಪ್ರದೀಪ್‌ಕುಮಾರ್, ನಾಗರಾಜ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT