ಮೈಸೂರು: ‘ವರುಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರವಾಗಿದ್ದು, ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಬೇಕು. ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ದೊರೆತಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಎರಡು ತಿಂಗಳ ಹಿಂದೆ ಮುಖ್ಯಮಂತ್ರಿಯವರು ವರುಣ ವಿಧಾನಸಭಾ ಕ್ಷೇತ್ರದಲ್ಲಿ ₹502 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದಾರೆ. ಆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಈ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಹೇಳಿದರು.

‘ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟಾರೆ ₹21.60 ಕೋಟಿ ಮೊತ್ತದ ಕಾಮಗಾರಿಗಳು ಕ್ಷೇತ್ರದಲ್ಲಿ ಪ್ರಗತಿಯಲ್ಲಿದ್ದು, ಅವುಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ತಾಂಡವಪುರ ಹಾಗೂ 31 ಗ್ರಾಮಗಳಿಗೆ ನೀರು ಪೂರೈಕೆಯ (ಬಹುಗ್ರಾಮ) ಯೋಜನೆ ಸೇರಿದಂತೆ ಒಟ್ಟು ₹123.30 ಕೋಟಿ ಅನುದಾನದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಮುಗಿಸಬೇಕು’ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮಗಳು ಸೇರಿದಂತೆ 35 ಇಲಾಖೆಗಳ ಪ್ರಗತಿ ವರದಿಗಳನ್ನು ಪರಿಶೀಲಿಸಿದರು.

ವಸತಿ ಯೋಜನೆ, ನರೇಗಾ, ಕಂದಾಯ ವಸೂಲಿ ಹಾಗೂ ಇತರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ವರುಣ ಕ್ಷೇತ್ರದ 35 ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಸೂಚಿಸಿದರು.

ಚಾಮರಾಜನಗರ ಸಂಸದ ಸುನೀಲ್ ಬೋಸ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಎನ್.ವಿಜಯ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.