ತಿ.ನರಸೀಪುರ (ಮೈಸೂರು ಜಿಲ್ಲೆ): ‘ಇಲ್ಲಿರುವ ಕೆಎಸ್ಐಸಿ ಕಾರ್ಖಾನೆಗೆ ಹೊಂದಿಕೊಂಡಿರುವ ಜಾಗದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣ ಸೂಕ್ತವಲ್ಲ ಎಂಬ ಅಭಿಪ್ರಾಯ ಪ್ರತಿಭಟನಕಾರರಿಂದ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅವರು ಕೊಡುತ್ತಿರುವ ತಾಂತ್ರಿಕ ಕಾರಣಗಳನ್ನು ಮರುಪರಿಶೀಲಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಧಿಸಿ 15 ದಿನಗಳಿಂದ ಕಾರ್ಮಿಕರು, ರೈತರು ಹಾಗೂ ಪರಿಸರವಾದಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಆಗಮಿಸಿ ಮನವಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

‘ಕ್ರೀಡಾಂಗಣಕ್ಕೆ ಸ್ಥಳದ ಕೊರತೆ ಇತ್ತು. ಈ ಜಾಗ ಸೂಕ್ತವೆಂದು ಅಧಿಕಾರಿಗಳು ವರದಿ ಕೊಟ್ಟಿದ್ದರು. ಹೀಗಾಗಿ, ಇಲ್ಲಿ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಆದರೆ, ಕಾರ್ಮಿಕರು, ವಿವಿಧ ಸಂಘಟನೆಗಳ ಮುಖಂಡರು ಸೇರಿ ಕೆಲವು ತಾಂತ್ರಿಕ ಕಾರಣಗಳನ್ನು ತಿಳಿಸಿ, ಇಲ್ಲಿ ಕ್ರೀಡಾಂಗಣ ನಿರ್ಮಿಸಬಾರದು ಎಂದು ಹೇಳುತ್ತಿದ್ದಾರೆ. ಹೀಗಾಗಿ, ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ದೇಶನ ನೀಡಲಾಗಿದೆ’ ಎಂದರು.

‘ವರದಿ ಬಂದ ಬಳಿಕ, ಈ ಸ್ಥಳ ಸೂಕ್ತವಲ್ಲ ಎಂದು ಕಂಡುಬಂದಲ್ಲಿ ಇಲ್ಲಿ ಕ್ರೀಡಾಂಗಣ ನಿರ್ಮಿಸುವುದಿಲ್ಲ. ಪರ್ಯಾಯ ಜಾಗ ಹುಡುಕೋಣ. ಈ ಜಾಗ ಸೂಕ್ತವೋ, ಅಲ್ಲವೋ ಎಂಬುದನ್ನು ವರದಿ ಬಂದ ಬಳಿಕ ತೀರ್ಮಾನಿಸಲಾಗುವುದು’ ಎಂದು ಹೇಳಿದರು.

ಇದಕ್ಕೂ ಮುನ್ನ ಕಾರ್ಖಾನೆ ಆವರಣದಲ್ಲಿ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.