ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾದರಿ ಕ್ಷೇತ್ರವಾಗಿ ವರುಣ ಅಭಿವೃದ್ಧಿ: ಡಾ.ಯತೀಂದ್ರ ಸಿದ್ದರಾಮಯ್ಯ

Published 11 ಜುಲೈ 2024, 14:56 IST
Last Updated 11 ಜುಲೈ 2024, 14:56 IST
ಅಕ್ಷರ ಗಾತ್ರ

ನಂಜನಗೂಡು: ‘ವರುಣ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು’ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ತಾಲ್ಲೂಕಿನ ಹೆಬ್ಯಾ ಗ್ರಾಮದಲ್ಲಿ ಗುರುವಾರ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲ ಗ್ರಾಮಗಳಲ್ಲೂ ಸಮುದಾಯ ಭವನಗಳು ಹಾಗೂ ಇನ್ನಿತರ ಕಾಮಗಾರಿಗಳು ಶೇ.90ರಷ್ಟು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳಲಿವೆ’ ಎಂದರು.

‘ಗ್ರಾಮಗಳ ಮೂಲ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ ಗ್ರಾಮಗಳ ಮಟ್ಟದಲ್ಲೂ ಅಭಿವೃದ್ಧಿ ಕಾರ್ಯ ನಡೆಯಲಿದೆ. ಸಮುದಾಯ ಭವನಗಳನ್ನು ಬೀಗ ಹಾಕಿ ಮುಚ್ಚದೇ ಸಾರ್ವಜನಿಕರ ಸಂಘ, ಸಂಸ್ಥೆಗಳ ಸಭೆ ಸಮಾರಂಭಗಳನ್ನು ನಡೆಸುವ ಮೂಲಕ ಸದಾ ಚಟುವಟಿಕೆಯ ಕೇಂದ್ರವಾಗಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಎಸ್.ಸಿ.ಬಸವರಾಜು, ಹಾಡ್ಯ ರಂಗಸ್ವಾಮಿ, ಇಂಧನ್ ಬಾಬು‌, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ, ರಾಜಮ್ಮ, ಮಹಾದೇವ, ನಾಗವೇಣಿ ರಾಜು, ಶಿವಣ್ಣ, ಮಹದೇವ್, ಕೆಂಪಣ್ಣ, ರೇವಮ್ಮ ಮಾಲೆಗೌಡ, ದಯಾನಂದಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT