ಮೈಸೂರು: ‘ವರುಣ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಿ ಸಣ್ಣ ನೀರಾವರಿ ಇಲಾಖೆಯಿಂದ ಅಭಿವೃದ್ಧಿಪಡಿಸಲಾಗುವುದು’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ವರುಣ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಯ ಗೆಜ್ಜಗನಹಳ್ಳಿ, ಹಾರೋಪುರ, ಸಾಲುಂಡಿ ಇಗ್ಲಿ, ತಾಯೂರು ಗ್ರಾಮಗಳಲ್ಲಿ ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

‘ಗೆಜ್ಜಗನಹಳ್ಳಿಯಲ್ಲಿ ಬಸ್ ನಿಲುಗಡೆ ಕೇಳಿದ್ದೀರಿ, ನಾಲೆಗಳನ್ನು ಅಭಿವೃದ್ಧಿಪಡಿಸಬೇಕು, ಚರಂಡಿ ಸ್ವಚ್ಛಗೊಳಿಸಬೇಕು, ಮಕ್ಕಳಿಗೆ ಕೆಲಸ ಕೊಡಿಸಬೇಕು, ಹಾರೋಪುರ ಗ್ರಾಮದ ರಸ್ತೆ ಅಭಿವೃದ್ಧಿ, ಕೆರೆ ಅಭಿವೃದ್ಧಿ ದೇವಸ್ಥಾನಕ್ಕೆ ಕಾಂಪೌಂಡ್, ಸ್ಮಶಾನಕ್ಕೆ ಜಾಗ ಬೇಕು ಎಂಬಿತ್ಯಾದಿ ಬೇಡಿಕೆಗಳು ಬಂದಿವೆ. ಇವುಗಳನ್ನೆಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಪರಿಹರಿಸಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.

‘ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರಿಗೆ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಬೇಕು’ ಎಂದು ಸೂಚಿಸಿದರು.

‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನೂ ಮಾಡಿಕೊಂಡು ಬರುತ್ತಿದೆ. ಇದನ್ನು ಸಹಿಸದ ಬಿ.ಜೆ.ಪಿ., ಜೆ.ಡಿ.ಎಸ್.ನವರು ಸುಳ್ಳು ಆರೋಪಗಳನ್ನು ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮುಖಂಡ ಎಸ್.ಸಿ. ಬಸವರಾಜು, ಮುಖ್ಯಮಂತ್ರಿಯರ ವಿಶೇಷಾಧಿಕಾರಿ ಕೆ.ಎನ್. ವಿಜಯ್, ಆಪ್ತಸಹಾಯಕರಾದ ಶಿವಸ್ವಾಮಿ, ಪ್ರದೀಪ್ಕುಮಾರ್, ಮಹೇಶ್, ಮುಖಂಡರಾದ ಮಣಿಯಯ್ಯ, ಕಲ್ಮಳ್ಳಿ ಬಾಬು, ಚಿನ್ನಂಬಳ್ಳಿ ರಾಜು, ಜಿ.ಡಿ. ವಿಠಲ್, ತಾಯೂರು ಬಸವರಾಜು, ರಾಜೇಶ್, ಶಿವಣ್ಣ, ಕುಮಾರ್, ನಾಗರಾಜ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.