ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಅರಮನೆ ಆವರಣದಲ್ಲಿ ಯೋಗೋತ್ಸವ

Last Updated 10 ಏಪ್ರಿಲ್ 2022, 5:56 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಮೈಸೂರು ಅರಮನೆ ಆವರಣದಲ್ಲಿ ಭಾನುವಾರ ನಡೆದ 'ಯೋಗೋತ್ಸವ'ದಲ್ಲಿ ನೂರಕ್ಕೂ ಅಧಿಕ ಮಂದಿ ಭಾಗಿಯಾದರು.

ಹಠಯೋಗಿ ಚಂದ್ರ ಆಚಾರ್ಯ ಅವರ ಯೋಗ ಪ್ರದರ್ಶನ ಗಮನ ಸೆಳೆಯಿತು. ಅವರು ನೌಲಿಕ್ರಿಯೆ ಯೋಗ ಪ್ರದರ್ಶಿಸಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ಯೋಗಪಟುಗಳು ಯೋಗಾಭ್ಯಾಸದಲ್ಲಿ ನಿರತರಾದರು.

ಇದಕ್ಕೂ ಮುನ್ನ ಸಂಸದ ಪ್ರತಾಪಸಿಂಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೇಂದ್ರ ಸರ್ಕಾರವು ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷದ ಪ್ರಯುಕ್ತ ದೇಶದ 100 ಐತಿಹಾಸಿಕ ಸ್ಥಳಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಉತ್ಸವಗಳನ್ನು ನಡೆಸಲು ಸೂಚಿಸಿತ್ತು.

ಹೀಗಾಗಿ, ಅರಮನೆ ಆವರಣದಲ್ಲಿ ಆಯುಷ್ ಸಚಿವಾಲಯ, ನವದೆಹಲಿಯ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ಮೈಸೂರಿನ ವೇದವ್ಯಾಸ ಯೋಗ ಪ್ರತಿಷ್ಠಾನ, ಜೆಎಸ್ಎಸ್ ಮಹಾವಿದ್ಯಾಪೀಠ ಹಾಗೂ ಮೈಸೂರು ಯೋಗ ಸಂಸ್ಥೆಗಳ ಒಕ್ಕೂಟ ಈ ಕಾರ್ಯಕ್ರಮ ಆಯೋಜಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT