ಮೈಸೂರು: `ಕೆಎಸ್‌ಆರ್‌ಟಿಸಿ ನಿರ್ವಾಹಕರು, ಅಧಿಕಾರಿಗಳು ತೊಂದರೆ ಕೊಟ್ಟಿದ್ದೇ ಆದಲ್ಲಿ ಅಂತಹವರ ಬಗ್ಗೆ ಕ್ರಮಕ್ಕೆ ಒತ್ತಾಯಿಸಿ ಪತ್ರ ಬರೆದರೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇನೆ~ ಎಂದು ಸಾರಿಗೆ ಸಚಿವ ಆರ್.ಅಶೋಕ್ ಇಲ್ಲಿ ತಿಳಿಸಿದರು.

ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿ ಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಾರ್ವಜನಿಕರಿಗೆ ತೊಂದರೆ ಕೊಟ್ಟ ಅಧಿಕಾರಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಅನುಮಾನ ಬೇಡ~ ಎಂದು ತಿಳಿಸಿದರು.

`ಬಸ್, ರೈಲ್ವೆ ನಿಲ್ದಾಣಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಸಾಂತ್ವನ ಕೇಂದ್ರವನ್ನು ತೆರೆಯಲಾಗುವುದು. ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ ಇಲ್ಲವೆಂಬ ಕೊರಗು ಇದೆ. ಸ್ವಂತ ಕಟ್ಟಡ ಹೊಂದಲು ಕ್ರಮ ಕೈಗೊಳ್ಳಲಾಗುವುದು~ ಎಂದು ಹೇಳಿದರು.

`ಬಿ.ಎಸ್.ಯಡಿಯೂರಪ್ಪ ಅವರು ಪ್ರಶ್ನಾತೀತ ನಾಯಕರು. ಪಕ್ಷ ಸಂಘಟಿಸಿ, ಬಿಜೆಪಿ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮಿಸಿದ್ದಾರೆ. ಮುಂದಿನ ಚುನಾವಣೆ ಯಲ್ಲಿ ಪಕ್ಷ ಜಯ ಸಾಧಿಸಲು ಈಗಿನಿಂದಲೇ ಶ್ರಮಿಸುತ್ತಿದ್ದಾರೆ. ಮುಂದಿನ ಆಯವ್ಯಯ ಯಾರು ಮಂಡಿಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ: ನಗರದ ಕ್ವೀನ್ಸ್ ಸ್ಕೂಲ್ ಆಫ್ ಡಿಸೈನ್, ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ 1 ತಿಂಗಳ ಹೊಲಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ತರಬೇತಿಯ ಅವಧಿ ಯಲ್ಲಿ 2 ಸಾವಿರ ಮಾಸಿಕ ವೇತನ ನೀಡಲಾ ಗುವುದು. 7ನೇ ತರಗತಿ ಉತ್ತಿರ್ಣ ರಾ ದವರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ನಂ.1102, ಕ್ವೀನ್ಸ್ ಸ್ಕೂಲ್ ಆಫ್ ಡಿಸೈನ್, ಉದ ಯರವಿ ರಸ್ತೆ, ಕುವೆಂಪುನಗರ ಅಥವಾ 0821- 2561845, 4006207 ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.