ಪಿರಿಯಾಪಟ್ಟಣ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿ ಎದುರಿಸಲು ಸನ್ನದ್ಧರಾಗ ಬೇಕು ಎಂದು ಉದ್ಯೋಗ ಮತ್ತು ತರಬೇತಿ ಇಲಾಖೆಯ ಸಹಾಯಕ ನಿರ್ದೇಶಕ ತಿಮ್ಮೇಗೌಡ ತಿಳಿಸಿದರು. ಪಟ್ಟಣದ ಸರ್ಕಾರಿ ಬಾಲಕರ ಸಂಯುಕ್ತ ಪದವಿ ಕಾಲೇಜಿನಲ್ಲಿ ಶುಕ್ರವಾರ ಉದ್ಯೋಗ ಮತ್ತು ತರಬೇತಿ ಇಲಾಖೆ ಏರ್ಪಡಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಸಹ ಉದ್ಯೋಗ ನೀಡುವಾಗ ಹೆಚ್ಚಿನಾಂಶ ಸ್ಪರ್ಧಾ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ ಇದನ್ನು ಗಮನದಲ್ಲಿಟ್ಟು ಕೊಂಡು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡುವ ಮತ್ತು ತರಬೇತಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಾಗಾರವನ್ನು ಉದ್ಘಾಟಿಸಿದ ಬಿಇಓ ಜಿ.ಎ.ಲೋಕೇಶ್ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲೂ ಸಾಕ್ಷಷ್ಟು ಜ್ಞಾನವಿದೆ ಅದನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡು ಉದ್ಯೋಗ ಪಡೆಯುವ ಬಗ್ಗೆ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಮುಂದಾಗಿರುವ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.

ಮೈಸೂರಿನ ಜ್ಞಾನ ಬುತ್ತಿ ಸಂಸ್ಥೆಯ ಸತ್ಯನಾರಾಯಣಗೌಡ ಮಾತನಾಡಿ ಸರ್ಕಾರದಿಂದ ನಡೆಯುತ್ತಿರುವ ಪರೀಕ್ಷೆಗಳು ಪಾರದರ್ಶಕವಾಗಿದ್ದು ಯಾವುದೆ ಮಧ್ಯವರ್ತಿಗಳ ಹಾವಳಿ ಇಲ್ಲದೆ ನಡೆಯುತ್ತಿವೆ ಎಂದು ತಿಳಿಸಿದರು. ಸರ್ಕಾರದ ಈ ಕ್ರಮದಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ಸೂಕ್ತ ಹುದ್ದೆ ಪಡೆಯಲು ಸಹಕಾರಿಯಾಗಿದೆ ಎಂದು ತಿಳಿಸಿದರು.ಕಾರ್ಯಾಗಾರದಲ್ಲಿ ಉಪನ್ಯಾಸಕ ನಿಶಾಪತಿ ಸೇರಿದಂತೆ ಹಲವು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.