ಕೆಂಗೇರಿ: ಮೈಸೂರು ರಸ್ತೆಯಲ್ಲಿರುವ ನಾಯಂಡಹಳ್ಳಿ ರೈಲು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ವಸತಿ ಸಚಿವ ವಿ.ಸೋಮಣ್ಣ ಬಿಬಿಎಂಪಿ ಹಾಗೂ ರೈಲ್ವೆ ಅಧಿಕಾರಿಗಳೊಂದಿಗೆ ಕಾಮಗಾರಿ ಪರಿವೀಕ್ಷಣೆ ನಡೆಸಿದರು.

ಸ್ಥಳೀಯರ ಬಹುದಿನ ಬೇಡಿಕೆಯಾದ ನಾಯಂಡಹಳ್ಳಿ ರೈಲ್ವೆ ಕೆಳಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಇದರೊಂದಿಗೆ ಮಳೆ ಬಂದಾಗ ಅವಾಂತರ ಸೃಷ್ಟಿಯಾಗುತ್ತಿದ್ದರಿಂದ ಒಳ ಚರಂಡಿ ಕಾಮಗಾರಿಗೂ ಚಾಲನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸೋಮಣ್ಣ ಹಾಗೂ ತೇಜಸ್ವಿ ಸೂರ್ಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಆರು ತಿಂಗಳ ಒಳಗೆ ರೈಲ್ವೆ ಕೆಳಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿ.ಸೋಮಣ್ಣ ಹೇಳಿದರು. ‘ರೈಲು ನಿಲ್ದಾಣವನ್ನು ಹೈಟೆಕ್‌ಗೊಳಿಸಲು ಸಂಪೂರ್ಣ ಸಹಕಾರ ನೀಡಲಾಗುವುದು. ಎಕ್ಸ್‌ಪ್ರೆಸ್ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆ ಹೊಂದುವಂತ ವ್ಯವಸ್ಥೆ ಕಲ್ಪಿಸುವುದಾಗಿ ತೇಜಸ್ವಿ ಸೂರ್ಯ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.