ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ, ಅಧೀನ ನ್ಯಾಯಾಲಯದಲ್ಲಿ 6.72 ಲಕ್ಷ ಪ್ರಕರಣಗಳು ಬಾಕಿ: ಕಿರಣ್ ರಿಜಿಜು

Last Updated 3 ಫೆಬ್ರುವರಿ 2023, 16:02 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಕಳೆದ 20 ವರ್ಷಗಳಿಂದ ಸುಮಾರು 6.72 ಲಕ್ಷ ಪ್ರಕರಣಗಳು ಬಾಕಿ ಉಳಿದಿವೆ ಎಂದು ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ ತಿಳಿಸಿದೆ.

ಅಷ್ಟೇ ಅಲ್ಲದೆ ಹೈಕೋರ್ಟ್‌ನಲ್ಲಿ 2,94,547 ಪ್ರಕರಣಗಳು ಇತ್ಯರ್ಥವಾಗದೆ ಉಳಿದಿವೆ.

ಇದಕ್ಕೆ ಲಿಖಿತ ರೂಪದಲ್ಲಿ ಉತ್ತರ ನೀಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು, ಕಳೆದ 20 ವರ್ಷಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ 2023 ಜನವರಿ 27ರವೆರೆಗೆ ಬಾಕಿ ಉಳಿದಿರುವ ಪ್ರಕರಣಗಳು 208. ಈ ಮಾಹಿತಿಯನ್ನು ಪ್ರಕರಣ ನಿರ್ವಹಣೆಗಳ ಸಂಯೋಜಿತ ಮಾಹಿತಿ ವ್ಯವಸ್ಥೆ (ಐಸಿಎಂಐಎಸ್‌)ಯಿಂದ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಕಳೆದ 20 ವರ್ಷಗಳಿಂದ ಹೈಕೋರ್ಟ್‌ಗಳಲ್ಲಿ 2,94,547 ಪ್ರಕರಣಗಳು ಮತ್ತು ಜಿಲ್ಲಾ ಹಾಗೂ ಅಧೀನ ನ್ಯಾಯಾಲಯಗಳಲ್ಲಿ 6,71,543 ಪ್ರಕರಣಗಳು 2023 ಫೆಬ್ರುವರಿ 1 ರವೆರೆಗೆ ಬಾಕಿ ಉಳಿದಿವೆ. ಈ ಕುರಿತ ಮಾಹಿತಿಯು ರಾಷ್ಟ್ರೀಯ ನ್ಯಾಯಾಂಗ ಅಂಕಿ ಅಂಶ ಕೋಷ್ಠಕದ (ಎನ್‌ಜೆಡಿಜಿ)ದಲ್ಲಿ ಲಭ್ಯವಿದೆ ಎಂದು ತಿಳಿಸಿದ್ದಾರೆ.

ದೀರ್ಘಕಾಲದಿಂದ ಪ್ರಕರಣಗಳು ಬಾಕಿ ಉಳಿದಿರುವುದಕ್ಕೆ ಸ್ಪಷ್ಟವಾದ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಈ ಬಾಕಿ ಉಳಿಯುತ್ತಿರುವ ಪ್ರಕರಣಗಳು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತಮ್ಮ ಹಕ್ಕುಗಳ ಬಗ್ಗೆ ಜನತೆ ಜಾಗೃತರಾಗಿದ್ದು, ದೂರು ದಾಖಲಿಸುವುದು ಹೆಚ್ಚಾಗಿ ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT