ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಟ್ಟೆ: 346 ಯೂನಿಟ್ ರಕ್ತ ಸಂಗ್ರಹ

ಶಿಬಿರವನ್ನು ಉದ್ಘಾಟಿಸಿದ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ. ಅಶೋಕ್
Last Updated 20 ಮಾರ್ಚ್ 2023, 6:50 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಸೊಸೈಟಿ, ನೇವಿ ಎನ್‌ಸಿಸಿ ಸಬ್‌ ಯೂನಿಟ್ ನಿಟ್ಟೆ, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ, ರೋಟರಿ ಕ್ಲಬ್ ನಿಟ್ಟೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಮಂಗಳೂರು, ನಿಟ್ಟೆ ಗಜ್ರಿಯಾ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು.

ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ನಿಟ್ಟೆ ಗಜ್ರಿಯಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ. ಅಶೋಕ್ ಮಾತನಾಡಿ, ನಿಟ್ಟೆ ತಾಂತ್ರಿಕ ಕಾಲೇಜಿನ ಈ ಯೋಜನೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ ಎಂದರು.

ಲಯನ್ಸ್ ಜಿಲ್ಲೆ 317ಸಿನ ಫಸ್ಟ್ ವೈಸ್ ಜಿಲ್ಲಾ ಗವರ್ನರ್ ಡಾ.ನೇರಿ ಕರ್ನೇಲಿಯೋ ಅವರು ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನದ ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಮಾತನಾಡಿ, ‘ರಕ್ತದಾನ ಶಿಬಿರವು ಒಂದು ಉತ್ತಮ ಯೋಜನೆಯಾಗಿದ್ದು ನಿಟ್ಟೆ ರೋಟರಿ ಕ್ಲಬ್, ಹಿರಿಯಡ್ಕದ ಲಯನ್ಸ್ ಕ್ಲಬ್, ನಿಟ್ಟೆ ಸಂಸ್ಥೆಯ ಎರಡು ಆಸ್ಪತ್ರೆಗಳು, ಉಡುಪಿ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳ ಶ್ರಮ ಮೆಚ್ಚುವಂತಹದ್ದು. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ಯೋಜಿಸುತ್ತಿದೆ’ ಎಂದರು.

ಉಪಪ್ರಾಂಶುಪಾಲ ಡಾ.ಐ ರಮೇಶ್ ಮಿತ್ತಂತಾಯ, ಡಾ.ಶ್ರೀನಿವಾಸ ರಾವ್ ಬಿ. ಆರ್, ನಿಟ್ಟೆ ರೋಟರಿ ಕ್ಲಬ್‌ನ ಅಧ್ಯಕ್ಷ ಡಾ.ಸುದೀಪ್ ಹೆಗ್ಡೆ, ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ರವೀಂದ್ರನಾಥ್ ಹೆಗ್ಡೆ, ನಿಟ್ಟೆ ರೆಡ್‌ಕ್ರಾಸ್‌ನ ಮುಖ್ಯಸ್ಥ ಡಾ.ಜನಾರ್ದನ್ ನಾಯಕ್, ಎನ್‌ಸಿಸಿ ಆಫೀಸರ್
ಡಾ.ಶಿವಪ್ರಸಾದ್ ಶೆಟ್ಟಿ, ಏಐಎಂಎಸ್ ಸಂಯೋಜಕ ಡಾ.ಸುರೇಶ್ ಶೆಟ್ಟಿ, ಎನ್ಎಸ್ಎಸ್ ಅಧಿಕಾರಿ ಶ್ರೀನಿವಾಸ ನೆಕ್ಕಾರ್, ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಡಾ.ಚಂದ್ರಿಕಾ ರಾವ್, ಉಡುಪಿ ಜಿಲ್ಲಾ ಆಸ್ಪತ್ರೆಯ ಡಾ.ವೀಣಾಕುಮಾರಿ ಇದ್ದರು.

ರಕ್ತದಾನ ಶಿಬಿರದಲ್ಲಿ 346 ಯೂನಿಟ್ ರಕ್ತ ಸಂಗ್ರಹವಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT