ಅತ್ಯಾಚಾರ ಪ್ರಕರಣ: ನಿತ್ಯಾನಂದ ವಿರುದ್ಧದ ವಿಚಾರಣೆ ಮುಂದೂಡಿಕೆ

7

ಅತ್ಯಾಚಾರ ಪ್ರಕರಣ: ನಿತ್ಯಾನಂದ ವಿರುದ್ಧದ ವಿಚಾರಣೆ ಮುಂದೂಡಿಕೆ

Published:
Updated:

ರಾಮನಗರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಮತ್ತು ಇತರ ಐವರು ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಇಲ್ಲಿನ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಇದೇ 10ಕ್ಕೆ ಮುಂದೂಡಿತು.

ನಿತ್ಯಾನಂದ ಸೇರಿದಂತೆ ಪ್ರಕರಣದ ಮೊದಲ ಮೂವರು ಆರೋಪಿಗಳು ಗುರುವಾರ ವಿಚಾರಣೆಗೆ ಗೈರಾಗಿದ್ದರು. ಆರೋಪಿಗಳ ವಿರುದ್ಧ ನ್ಯಾಯಾಲಯವು ಹೊರಡಿಸಿರುವ ಜಾಮೀನು ರಹಿತ ವಾರೆಂಟ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಅಲ್ಲಿ ವಿಚಾರಣೆ ಪೂರ್ಣಗೊಳ್ಳುವವರೆಗೂ ಸ್ಥಳೀಯ ನ್ಯಾಯಾಲಯವು ಯಾವುದೇ ಆದೇಶ ಹೊರಡಿಸಬಾರದು ಎಂದು ಆರೋಪಿ ಪರ ವಕೀಲರು ಮನವಿ ಮಾಡಿದರು.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಈ ವಿಚಾರಣೆಗೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ವಿಚಾರಣೆಯನ್ನು ಮುಂದೂಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !