ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಬಂಗಲೆ ಖಾಲಿ ಮಾಡಲು ಕಾಲಾವಕಾಶ ಕೋರಿ ’ಸುಪ್ರೀಂ’ಗೆ ಅರ್ಜಿ

Last Updated 28 ಮೇ 2018, 20:13 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಹಾಗೂ ಅವರ ಮಗ ಅಖಿಲೇಶ್ ಯಾದವ್ ಅವರು ತಾವು ವಾಸಿಸುತ್ತಿರುವ ಅಧಿಕೃತ ಸರ್ಕಾರಿ ನಿವಾಸಗಳನ್ನು ಖಾಲಿ ಮಾಡಲು ಕಾಲಾವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಗಳ ಅಧಿಕಾರ ಅವಧಿ ಮುಕ್ತಾಯಗೊಂಡ ನಂತರ ಸರ್ಕಾರಿ ಬಂಗಲೆಯಲ್ಲಿ ವಾಸಿಸುವಂತಿಲ್ಲ. ಅವರು ಕೂಡ ಸಾಮಾನ್ಯ ವ್ಯಕ್ತಿಗಳು ಎಂದು ಮೇ 7ರಂದು ಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

ಲಖನೌದ ತಮ್ಮ ಖಾಸಗಿ ನಿವಾಸಕ್ಕೆ ತೆರಳಲು ಎರಡು ವರ್ಷ ಸಮಯ ನೀಡುವಂತೆ ಕೋರಿ ಈ ಇಬ್ಬರೂ ಮಾಜಿ ಮುಖ್ಯಮಂತ್ರಿಗಳು, ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಕುಟುಂಬದ ಭದ್ರತಾ ದೃಷ್ಟಿಯಿಂದ ಮನೆ ಖಾಲಿ ಮಾಡಲು ಅವಧಿ ವಿಸ್ತರಿಸುವಂತೆ ಅಖಿಲೇಶ್‌ ಯಾದವ್‌ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT