ಮಂಗಳವಾರ, ಜೂನ್ 2, 2020
27 °C

ಶಿರಾಳಕೊಪ್ಪ ಮುಖ್ಯಾಧಿಕಾರಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೊರೊನಾ ನಿರ್ಬಂಧಗಳ ಸಮಯದಲ್ಲಿ ಜನರಲ್ಲಿ ಜಾಗೃತಿ ಮೂಡಿಸದೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಮಾನತು ಮಾಡಿದ್ದಾರೆ.

ಹನುಮಂತಪ್ಪ ಮಣ್ಣವಡ್ಡರ್ ಅಮಾತುಗೊಂಡವರು.

ಕೊರೊನಾ ನಿರ್ಬಂಧ ಜಾರಿಯಾದ ನಂತರ ಕೇಂದ್ರಸ್ಥಾನದಲ್ಲಿ ಇರದೆ, ಹಾಚೇರಿಯಿಂದ ನಿತ್ಯವೂ ಓಡಾಡುತ್ತಿದ್ದರು. ಸಮಯಕ್ಕೆ ಸರಿಯಾಗಿ ಬಾರದೇ ಸೂಕ್ಷ್ಮ ಸನ್ನಿವೇಶದಲ್ಲೂ ಕರ್ತವ್ಯ ಲೋಪ ಎಸಗಿದ್ದಾರೆ. ತಹಶೀಲ್ದಾರ್ ನೀಡಿದ ಸೂಚನೆಗಳನ್ನು ಪಾಲಿಸಿಲ್ಲ. ಹಾಗಾಗಿ, ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.