ಬುಧವಾರ, ಫೆಬ್ರವರಿ 26, 2020
19 °C

ಅಕ್ರಮ ಈರುಳ್ಳಿ ದಾಸ್ತಾನು: ವರ್ತಕರ ಮೇಲೆ ನಿಗಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಈರುಳ್ಳಿ ಬೆಲೆ ಏರಿಕೆ ಪರಿಣಾಮ ಕೃತಕ ಅಭಾವ ಸೃಷ್ಟಿಸುತ್ತಿರುವ ವರ್ತಕರ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣಿರಿಸಿದೆ.

ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಪರವಾನಗಿ ಆದೇಶ ತಿದ್ದುಪಡಿ-2019 ಜಾರಿಗೊಳಿಸಿದೆ. ಜಿಲ್ಲೆಯ ಈರುಳ್ಳಿ ಸಗಟು ಮತ್ತು ಚಿಲ್ಲರೆ ವರ್ತಕರು ತಕ್ಷಣ ಪರವಾನಗಿ ಪಡೆಯಬೇಕು ಎಂದು ಸೂಚಿಸಿದೆ.

ಈರುಳ್ಳಿ ಬೆಲೆ ಗಗನಕ್ಕೇರಿದ ಲಾಭ ಪಡೆಯಲು ಕೆಲವು ವರ್ತಕರು ಈರುಳ್ಳಿ ಅಕ್ರಮ ದಾಸ್ತಾನು ಮಾಡುತ್ತಿದ್ದಾರೆ. ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ. ಹಾಗಾಗಿ, ಶಿವಮೊಗ್ಗ ನಗರ ಮತ್ತು ಭದ್ರಾವತಿ ಈರುಳ್ಳಿ ಸಗಟು ಮತ್ತು ಚಿಲ್ಲರೆ ವರ್ತಕರು ತಕ್ಷಣ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರು, ತಹಶೀಲ್ದಾರರಿಂದ ತಕ್ಷಣ ಪರವಾನಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಸೂಚಿಸಿದೆ.

ಈರುಳ್ಳಿ ಅನಧಿಕೃತವಾಗಿ ದಾಸ್ತಾನು ಮಾಡಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು