ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಸಭೆ, ಪುರಸಭೆ ಚುನಾವಣೆ: ಶಿಕಾರಿಪುರ ‘ಕೈ’ ವಶ, ಯಡಿಯೂರಪ್ಪ ತವರಿನಲ್ಲೇ ಮುಖಭಂಗ

Last Updated 3 ಜೂನ್ 2019, 8:19 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ ಒಂದು ನಗರಸಭೆ, ಒಂದು ಪುರಸಭೆ,ಮೂರುಪಟ್ಟಣ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಒಂದರಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್,ಎರಡರಲ್ಲಿಮೈತ್ರಿ, ಮತ್ತೊಂದರಲ್ಲಿಅತಂತ್ರ ಫಲಿತಾಂಶ ದೊರಕಿದೆ.

ಯಡಿಯೂರಪ್ಪ ತವರು ಕ್ಷೇತ್ರದಲ್ಲಿ ಮುಖಭಂಘ:

ಶಿಕಾರಿಪುರಪುರಸಭೆಅಧಿಕಾರಕಾಂಗ್ರೆಸ್ವಶವಾಗಿದ್ದು,ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆತವರು ಕ್ಷೇತ್ರದಲ್ಲೇ ತೀವ್ರ ಮುಖಭಂಗವಾಗಿದೆ. ಎರಡು ದಶಕಗಳಿಗೂ ಹೆಚ್ಚು ಅವಧಿ ಅಧಿಕಾರದಲ್ಲಿ ಇದ್ದ ಬಿಜೆಪಿ ಸೋಲು ಅನುಭವಿಸಿದೆ.

23 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 12, ಬಿಜೆಪಿ 8 ಹಾಗೂ ಪಕ್ಷೇತರರು3 ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ.

ಸಾಗರ ನಗರಸಭೆ ಬಿಜೆಪಿ ತೆಕ್ಕೆಗೆ: ಸಾಗರ ನಗರಸಭೆ ಬಿಜೆಪಿ ವಶವಾಗಿದೆ. 31 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 16, ಕಾಂಗ್ರೆಸ್ 9, ಜೆಡಿಎಸ್ 1 ಹಾಗೂ ಐವರು ಪಕ್ಷೇತರರು ಜಯ ಗಳಿಸಿದ್ದಾರೆ.

ಸೊರಬ ಅತಂತ್ರ: ಸೊರಬ ಪಟ್ಟಣ ಪಂಚಾಯಿತಿಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭಿಸಿಲ್ಲ. 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್, ಜೆಡಿಎಸ್ 5 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.

ಶಿರಾಳಕೊಪ್ಪ, ಹೊಸನಗರದಲ್ಲಿ ಮೈತ್ರಿಗೆ ಗೆಲುವು: ಶಿರಾಳಕೊಪ್ಪ ಪಟ್ಟಣ ಪಂಚಾಯಿತಿ ಮೈತ್ರಿ ವಶವಾಗಿದೆ. 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 7, ಜೆಡಿಎಸ್ 3, ಬಿಜೆಪಿ 2 ಹಾಗೂ ಮೂವರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ಹೊಸನಗರ‍ಪಟ್ಟಣ ಪಂಚಾಯಿಯ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 4, ಜೆಡಿಎಸ್ 3 ಹಾಗೂ ಬಿಜೆಪಿ 4 ಸ್ಥಾನಗಳಲ್ಲಿ ಜಯಗಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT