ಭಾನುವಾರ, ಜೂನ್ 26, 2022
22 °C

ಗುರುಮಠಕಲ್: ಗುಡುಗು ಸಹಿತ ಮಳೆ, ಸಿಡಿಲಿಗೆ ಎತ್ತು ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುರುಮಠಕಲ್ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಚಪೆಟ್ಲಾ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿದ್ದ ಭೀಮಪ್ಪ ಮಾಣಿಕ್ಯಪ್ಪ ಅವರಿಗೆ ಸೇರಿದ ಎತ್ತು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದೆ.

ಶುಕ್ರವಾರ ಸಂಜೆ ವೇಳೆ ಮೋಡಕವಿದ ವಾತಾವರಣವಿತ್ತು. ಗುಡುಗು ಸಮೇತ ಐದು ನಿಮಿಷಗಳ ಕಾಲ ಗಾಳಿ, ಮಳೆ ಸುರಿಯಿತು. ಆಗ ಜಮೀನಿನಲ್ಲಿದ್ದ ಎತ್ತಿಗೆ ಸಿಡಿಲು ಬಡಿದಿದ್ದು, ಸಿಡಿಲಿನ ಆಘಾತಕ್ಕೆ ಎತ್ತು ಸ್ಥಳದಲ್ಲೇ ಪ್ರಾಣ ಬಿಟ್ಟಿದೆ ಎಂದು ಸ್ಥಳೀಯ ನಿವಾಸಿ ಮಹಾದೇವಪ್ಪ ಭಂಗಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು