ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನದ ಅರಿವಿಗಾಗಿ ವೈಮಾನಿಕ ಪ್ಯಾರಾ ಮೋಟರಿಂಗ್

Last Updated 29 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಚಿತ್ರದುರ್ಗ: ವೈಮಾನಿಕ ಪ್ಯಾರಾ ಮೋಟರಿಂಗ್ ಹಾರಾಟದ ಮೂಲಕ ಮತದಾನದ ಅರಿವು ಮೂಡಿಸುವ ಪ್ರಯತ್ನ ಇಲ್ಲಿ ನಡೆಯಿತು.

ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಚುನಾವಣಾ ಆಯೋಗ, ಜಿಲ್ಲಾಡಳಿತ, ಚುನಾವಣಾ ಜಾಗೃತಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಮಹಾರಾಷ್ಟ್ರದ ಕ್ಯಾಪ್ಟನ್ ನಿತ್ಯಾನಂದ ನಾಯಕವಾಡಿ ವೈಮಾನಿಕ ಪ್ಯಾರಾ ಮೋಟರ್ ಹಾರಾಟ ಆರಂಭಿಸಿದರು.

ಮತದಾನದ ಮಹತ್ವ, ವಿದ್ಯುನ್ಮಾನ ಯಂತ್ರ, ವಿವಿಪ್ಯಾಟ್ ಬಳಕೆ ಹಾಗೂ ಕಾರ್ಯನಿರ್ವಹಣೆ ಕುರಿತ ಕರಪತ್ರಗಳನ್ನು ನಗರ ಹಾಗೂ ಹೊರವಲಯದ ಬಡಾವಣೆಗಳಲ್ಲಿ ಮೇಲಿನಿಂದ ಹಾರಿ ಬಿಟ್ಟು, ಕೆಲವು ಮತದಾರರ ಗಮನ ಸೆಳೆಯಲಾಯಿತು. ಐಯುಡಿಪಿ, ಕೆಳಗೋಟೆ, ಹೌಸಿಂಗ್ ಬೋರ್ಡ್ ಕಾಲೊನಿ, ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣ, ಖಾಸಗಿ ಬಸ್‌ ನಿಲ್ದಾಣ, ರೈಲು ನಿಲ್ದಾಣ ಒಳಗೊಂಡಂತೆ ವಿವಿಧೆಡೆ ಸುಮಾರು ಒಂದೂವರೆ ಗಂಟೆ ಈ ಪ್ರಕ್ರಿಯೆ ನಡೆಯಿತು.

ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ಕರಪತ್ರಗಳನ್ನು ಹಂಚುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ‘ದುರ್ಗದ ಮಂದಿಯ ಮನಸ್ಸನ್ನು ಆಮಿಷಗಳಿಂದ ಗೆಲ್ಲುವುದು ಅಷ್ಟು ಸುಲಭವಲ್ಲ. ತಪ್ಪದೇ ಮತದಾನ ಮಾಡುವ ಮೂಲಕ ಚುನಾವಣೆ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಸ್ವೀಪ್ ಸಮಿತಿ ಅಧ್ಯಕ್ಷ ಪಿ.ಎನ್. ರವೀಂದ್ರ ಕೂಡ ಮತದಾನದ ಮಹತ್ವ ಕುರಿತು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT