ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಸಿಪಿಎಂ ನಾಯಕರ ಭೇಟಿ

ಮಂಗಳೂರಿನಲ್ಲಿ ವಿಧಾನಸಭೆ ಚುನಾವಣಾ ತಯಾರಿ
Last Updated 14 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಮಂಗಳೂರು: ಕೇರಳ ಸಿಪಿಎಂನ ಹಿರಿಯ ಮುಖಂಡರು ಶನಿವಾರ ನಗರಕ್ಕೆ ಭೇಟಿ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಪಕ್ಷ ಮಾಡಿಕೊಂಡಿರುವ ಸಿದ್ಧತೆ ಕುರಿತು ಚರ್ಚೆ ನಡೆಸಿದರು. ಚುನಾವಣಾ ತಯಾರಿ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರಿಗೆ ಮಾರ್ಗದರ್ಶನ ನೀಡಿದರು.

ಸಿಪಿಎಂ ಕೇರಳ ರಾಜ್ಯ ಮಂಡಳಿ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್‌, ಸಂಸದ ಕರುಣಾಕರನ್‌, ಪಕ್ಷದ ಪಾಲಿಟ್‌ ಬ್ಯೂರೋ ಸದಸ್ಯ ಎನ್‌.ಎ. ಬೇಬಿ ಸೇರಿದಂತೆ ಹಲವು ಮುಖಂಡರು ತಂಡದಲ್ಲಿದ್ದರು. ಸಿಪಿಎಂ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು (ಉಳ್ಳಾಲ), ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಮತ್ತು ಮೂಡುಬಿದಿರೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ.

ಸಭೆಯಲ್ಲಿ ಪಕ್ಷದ ಜಿಲ್ಲಾ ಮಂಡಳಿ ಕಾರ್ಯದರ್ಶಿ ಕೆ.ವಸಂತ ಆಚಾರಿ, ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಮುನೀರ್ ಕಾಟಿಪಳ್ಳ, ಸುನೀಲ್‌
ಕುಮಾರ್ ಬಜಾಲ್‌, ಕೆ. ಯಾದವ ಶೆಟ್ಟಿ, ನಿತಿನ್‌ ಕುತ್ತಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT