ವಿಧಾನಸಭೆಯಲ್ಲೇ ಗಣೇಶ್‌ ಬಂಧನಕ್ಕೆ ಸಿದ್ಧತೆ

7

ವಿಧಾನಸಭೆಯಲ್ಲೇ ಗಣೇಶ್‌ ಬಂಧನಕ್ಕೆ ಸಿದ್ಧತೆ

Published:
Updated:

ರಾಮನಗರ: ಬುಧವಾರ ವಿಧಾನಮಂಡಲ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಈ ಸಂದರ್ಭ ಶಾಸಕ ಜೆ.ಎನ್. ಗಣೇಶ್‌ ಬಂಧನಕ್ಕೆ ರಾಮನಗರ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಬಿಡದಿಯ ಈಗಲ್‌ಟನ್‌ ರೆಸಾರ್ಟಿನಲ್ಲಿ ಶಾಸಕ ಆನಂದ್ ಸಿಂಗ್‌ ಮೇಲೆ ಹಲ್ಲೆ ನಡೆಸಿದ ಬಳಿಕ ಗಣೇಶ್‌ ತಲೆಮರಿಸಿಕೊಂಡಿದ್ದಾರೆ. ಇತ್ತ ಕಾಂಗ್ರೆಸ್‌ ತನ್ನ ಶಾಸಕರಿಗೆ ವಿಪ್‌ ಜಾರಿಗೊಳಿಸುತ್ತಿದ್ದು, ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಅವರು ಬುಧವಾರ ವಿಧಾನಸಭೆಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ವಿಧಾನಸಭೆ ಆವರಣದಲ್ಲಿ ಗಣೇಶ್‌ರನ್ನು ಬಂಧಿಸಬೇಕಿದ್ದಲ್ಲಿ ಸಭಾಧ್ಯಕ್ಷರ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇದಕ್ಕಾಗಿ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್‌ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳ ಸಲಹೆ ಕೇಳಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !