ಮಂಗಳವಾರ, ಏಪ್ರಿಲ್ 7, 2020
19 °C

ಸಾಗರ: ಏಪ್ರಿಲ್ 1ರವರೆಗೆ ಕೋಳಿ ಮಾಂಸದ ಅಂಗಡಿ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಹಕ್ಕಿ ಜ್ವರ ಹಾಗೂ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಏಪ್ರಿಲ್ 1ರವರೆಗೆ ನಗರದಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಲು ತಾಲ್ಲೂಕು ಕೋಳಿ ಮಾಂಸ ಮಾರಾಟಗಾರರ ಸಂಘ ನಿರ್ಧರಿಸಿದೆ.

ಆದಾಗ್ಯೂ ಕೆಲವರು ಕದ್ದುಮುಚ್ಚಿ ಕೋಳಿ ಮಾಂಸ ಮಾರಾಟ ಮಾಡುತ್ತಿದ್ದು, ಅಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಸಂಘದ ಪ್ರಮುಖರು ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

‘ತಾಲ್ಲೂಕು ಆಡಳಿತ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸದೇ ಇದ್ದರೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸ್ವಯಂಪ್ರೇರಿತರಾಗಿ ಕೋಳಿ ಮಾಂಸ ಮಾರಾಟವನ್ನು ತಡೆದಿದ್ದೇವೆ’ ಎಂದು ಮನವಿಯಲ್ಲಿ ಹೇಳಲಾಗಿದೆ.

ಇಂತಹ ಸನ್ನಿವೇಶದಲ್ಲಿ ಕೋಳಿ ಮಾಂಸ ಮಾರಾಟ ಮಾಡುವುದು ಸೂಕ್ತವಲ್ಲ ಎಂದು ಹೇಳಿದರೂ ಕೆಲವರು ಸಂಘದ ಪ್ರಮುಖರ ಮಾತುಗಳನ್ನು ಕೇಳುತ್ತಿಲ್ಲ. ಅಂತಹವರ ಮೇಲೆ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.

ಸಂಘದ ಅಧ್ಯಕ್ಷ ಸೈಯದ್ ತಾಹಿರ್, ಬಾಷಾ ಸಾಬ್, ಇಬ್ರಾಹಿಂ, ಇರ್ಫಾನ್, ಶಫಿ ಅಹ್ಮದ್, ಯಾಸಿನ್, ಉಮರ್, ಅಕ್ಮಲ್, ಮಹ್ಮದ್ ರಫೀಕ್, ಯೂಸೂಫ್, ಅಬ್ದುಲ್ ಖಾದರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು