ಮಂಗಳವಾರ, ಫೆಬ್ರವರಿ 18, 2020
20 °C

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಗರದ ನೆಹರೂ ಕ್ರೀಡಾಂಗಣದಲ್ಲಿ ಡಿಸೆಂಬರ್ ಕೊನೆಯವಾರ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗುಂಪು, ವೈಯಕ್ತಿಕ ವಿಭಾಗಗಳಲ್ಲಿ ಸ್ಪರ್ಧೆಗಳಲ್ಲಿ ನಡೆಯಲಿವೆ. 2 ದಿನ ನಡೆಯಲಿರುವ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ 3  ಸಾವಿರಕ್ಕೂ ಹೆಚ್ಚಿನ ನೌಕರ ಸ್ಪರ್ಧಿಗಳು ಭಾಗವಹಿಸುವರು. ಎಲ್ಲರಿಗೂ ಅಗತ್ಯ ಊಟೋಪಹಾರದ ವ್ಯವಸ್ಥೆ ಮಾಡಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಳುಗಳಿಗೆ ಆಯಾ ಇಲಾಖೆಯ ಅನುಮತಿ ನೀಡಬೇಕು ಎಂದರು.

ಎಲ್ಲ ಸ್ಪರ್ಧೆಗಳು ಪಾರದರ್ಶಕವಾಗಿ, ವಿವಾದರಹಿತವಾಗಿ ನಡೆಯಲು ಪರಿಣತ ತೀರ್ಪುಗಾರರ ನೇಮಿಸಲಾಗುವುದು. ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಲು ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಕ್ರೀಡಾ ಸಚಿವರು, ಜಿಲ್ಲೆಯ ಜನಪ್ರತಿಗಳು, ಅಧಿಕಾರಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಈ ಬಾರಿಯ ಕ್ರೀಡಾಕೂಟ ವೈಶಿಷ್ಟ್ಯ ಪೂರ್ಣವಾಗಿ ನಡೆಯಲಿವೆ. ಭಾಗವಹಿಸುವ ಸ್ಪರ್ಧಿಗಳಿಗೆ ಕ್ಯಾಪ್ ಹಾಗೂ ಟೀ ಶರ್ಟ್‌ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ. ಕ್ರೀಡಾಕೂಟದ ಮೊದಲ ದಿನ ಕಲಾವಿದರನ್ನು ಆಹ್ವಾನಿಸಿ ರಸಸಂಜೆ ಕಾರ್ಯಕ್ರಮ ಏರ್ಪಡಿಸಲಾಗುವುದು. ಆಕರ್ಷಕ ಸ್ಮರಣಿಕೆ ನೀಡಲಾಗುವುದು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಅನುರಾಧ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರೀಧರ್, ಡಿಎಚ್‌ಒ ಡಾ.ರಾಜೇಶ್ ಸುರಗಿಹಳ್ಳಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು