ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ಉತ್ಪಾದನೆ ಹೆಚ್ಚಳ ನಿರೀಕ್ಷೆ

Last Updated 9 ಜೂನ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಮಾರುಕಟ್ಟೆ ವರ್ಷದಲ್ಲಿ ಸಕ್ಕರೆ ಉತ್ಪಾದನೆಯು (2017–18ರ ಅಕ್ಟೋಬರ್‌–ಸೆಪ್ಟೆಂಬರ್‌) ದಾಖಲೆ ಪ್ರಮಾಣದಲ್ಲಿ ಇರಲಿದೆ ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟ (ಐಎಸ್‌ಎಂಎ) ಹೇಳಿದೆ.

2016–17ನೇ ಮಾರುಕಟ್ಟೆ ವರ್ಷದಲ್ಲಿ  2.03 ಕೋಟಿ ಟನ್‌ ಉತ್ಪಾದನೆ ಆಗಿತ್ತು. ಈ ಬಾರಿ 3.15 ಕೋಟಿ ಟನ್‌ಗಳಿಂದ 3.20 ಕೋಟಿ ಟನ್‌ಗಳಿಗೆ ಏರಿಕೆಯಾಗುವ ನಿರೀಕ್ಷೆ ಮಾಡಿದೆ.

2018ರ ಏಪ್ರಿಲ್‌ 30ರವರೆಗೆ 3.10 ಕೋಟಿ ಟನ್‌ ಸಕ್ಕರೆ ಉತ್ಪಾನೆ ಆಗಿದೆ. ಈಗಲೂ 130 ಕಾರ್ಖಾನೆಗಳಲ್ಲಿ ಕಬ್ಬು ಅರೆಯುವಿಕೆ ನಡೆಯುತ್ತಿದೆ. ಅದರಲ್ಲೂ ಉತ್ತರ ಪ್ರದೇಶದಲ್ಲಿ ಕಬ್ಬು ಅರೆಯುವ ಚಟುವಟಿಕೆ ಉತ್ತಮವಾಗಿದೆ. ಹೀಗಾಗಿ ಈ ಬಾರಿ ಉತ್ಪಾದನೆಯಲ್ಲಿ ಏರಿಕೆಯಾಗುವ ಅಂದಾಜು ಮಾಡಲಾಗಿದೆ ಎಂದು ಒಕ್ಕೂಟವು ತಿಳಿಸಿದೆ.

ನಷ್ಟದಲ್ಲಿ ಕಾರ್ಖಾನೆಗಳು: ದಾಖಲೆ ಪ್ರಮಾಣದಲ್ಲಿ ಉತ್ಪಾದನೆ ಆಗುತ್ತಿರುವುದರಿಂದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ಇದರಿಂದ ಕಾರ್ಖಾನೆಗಳಿಗೆ ಭಾರಿ ನಷ್ಟವಾಗುತ್ತಿದೆ. ಕೆ.ಜಿಗೆ ₹ 8 ರಿಂದ ₹ 9ರಷ್ಟು ನಷ್ಟವಾಗುತ್ತಿದೆ. ಉತ್ಪಾದನಾ ವೆಚ್ಚ ಕೆ.ಜಿಗೆ ₹ 35 ರಷ್ಟಿದೆ. ಕಾರ್ಖಾನೆಗಳು ಮಾರಾಟ ಮಾಡುವ ಬೆಲೆ ಕೆ.ಜಿಗೆ ₹ 26 ರಿಂದ ₹ 27 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT