ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಗೆ ಹಿಂದುಳಿದ ಜಾತಿಗಳ ಒಕ್ಕೂಟದ ಬೆಂಬಲ

Last Updated 16 ಏಪ್ರಿಲ್ 2019, 14:11 IST
ಅಕ್ಷರ ಗಾತ್ರ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಿರ್ಧರಿಸಿದೆ. ಶಿವಮೊಗ್ಗದಲ್ಲಿ ಮಧುಬಂಗಾರಪ್ಪ ಅವರ ಪರ ಪ್ರಚಾರ ನಡೆಸಲಾಗುತ್ತಿದೆಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹೇಳಿದರು.

ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಒಂದು ಪ್ರಾದೇಶಿಕ ಪಕ್ಷ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿ ನೋಡಿದಾಗ ಬೇಸರವಾಗಿದೆ. ಬಿಜೆಪಿಯ 27 ಅಭ್ಯರ್ಥಿಗಳಲ್ಲಿ ಹಿಂದುಳಿದ ಜಾತಿಗೆ ಸೇರಿದ ಒಬ್ಬರೂ ಇಲ್ಲ. ಆ ಪಕ್ಷ ಹಿಂದುಳಿದ ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಮಂಗಳವಾರ ಪತ್ರಿಕಾಗೊಷ್ಠಿಯಲ್ಲಿ ಆರೋಪಿಸಿದರು.

ಬಿಜೆಪಿ ಹಿಂದುಳಿದ ಸಮುದಾಯಗಳಿಗೆ ಸಂವಿಧಾನ ಬದ್ಧವಾದ ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ. ಬದ್ಧತೆ ತೋರಿಲ್ಲ. ಹಿಂದುಳಿದವರ ಬಗ್ಗೆ ಬಿಜೆಪಿ ತೋರುತ್ತಿರುವ ಅನಾದಾರ ಮನೋಭಾವವನ್ನು ಒಕ್ಕೂಟ ಬಲವಾಗಿ ಖಂಡಿಸುತ್ತದೆ ಎಂದರು.

ಒಕ್ಕೂಟದ ಪದಾಧಿಕಾರಿಗಳು ರಾಜ್ಯದ ಎಲ್ಲೆಡೆ ಪ್ರವಾಸ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಮಧುಬಂಗಾರಪ್ಪ ಪರವಾಗಿ ಶಿವಮೊಗ್ಗ ಕ್ಷೇತ್ರದ ಎಲ್ಲಾ ಹಿಂದುಳಿದ ಸಮುದಾಯಗಳು ಒಗ್ಗಟ್ಟಿನಿಂದ ಬೆಂಬಲ ನೀಡುತ್ತಿವೆ. ಅವರ ಗೆಲುವಿಗೆ ಶ್ರಮಿಸುತ್ತಿವೆ. ಜೆಡಿಎಸ್‌ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಎಸ್.ಪಿ.ಶೇಷಾದ್ರಿ ಮಾತನಾಡಿ, ಈ ಬಾರಿ ಮೈತ್ರಿಕೂಟದ ಅಭ್ಯರ್ಥಿ ಗೆಲುವು ಖಚಿತ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಧನೆಗಳು ಗೆಲುವಿಗೆ ದಾರಿಯಾಗಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಪ್ರದಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಹಿಂದುಳಿದ ವರ್ಗಗಳ ಮುಖಂಡರಾದ ಆರ್.ವೆಂಕಟರಾಮಯ್ಯ, ಪಿ.ರಾಜಕುಮಾರ್, ಎಸ್.ಬಿ.ಅಶೋಕ್‌ಕುಮಾರ್, ಜಿ.ಮಾದಪ್ಪ, ಕೆ.ರಂಗನಾಥ್, ಪ್ರವೀಣ್‌ಕುಮಾರ್, ಎಚ್.ಫಾಲಾಕ್ಷಿ, ಸುನೀಲ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT