ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಿಕಾ ದಿನಾಚರಣೆ, 12ಕ್ಕೆ ಕಾರ್ಯಾಗಾರ

Last Updated 6 ಜುಲೈ 2019, 14:25 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಜುಲೈ 8ರ ಬೆಳಿಗ್ಗೆ 10.30ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಂಡಿದೆ.

ಪತ್ರಿಕಾ ದಿನಾಚರಣೆಯ ಜತೆಗೆ, ನಿವೃತ್ತ ಪೊಲೀಸ್‌ ಅಧಿಕಾರಿ ಡಾ.ಡಿ.ವಿ.ಗುರುಪ್ರಸಾದ್‌ ಅವರ ಗೂಢಚರ್ಯೆಯ ಆ ದಿನಗಳು ಹಾಗೂ ವೀರಪ್ಪನ್ ಕುರಿತ ಕೃತಿಗಳ ಬಿಡಗಡೆ ಕಾರ್ಯ ಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪತ್ರಿಕಾ ದಿನಾಚರಣೆ, ಅಪರಾಧ ಸುದ್ದಿಗಳ ವರದಿಗಾರಿಕೆ ಹಾಗೂ ಕಾನೂನು ಕುರಿತ ಸಂವಾದ ಕಾರ್ಯಕ್ರಮವನ್ನು ಡಾ.ಡಿ.ವಿ.ಗುರುಪ್ರಸಾದ್ , ಹಿರಿಯ ವಕೀಲ ಕೆ.ಬಸಪ್ಪಗೌಡ ನಡೆಸಿ ಕೊಡುವರು. ಜಿಲ್ಲಾಧಿಕಾರಿ ಕೆ.ಎ.ದಯಾನಂದ ಕಾರ್ಯಕ್ರಮ ಉದ್ಘಾಟಿಸುವರು. ಸಾಹಿತಿ ಡಾ.ರಾಜೇಂದ್ರ ಚೆನ್ನಿ ಉಪನ್ಯಾಸ ನೀಡುವರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ನಿರ್ದೇಶಕ ಎನ್.ರವಿಕುಮಾರ್ ಭಾಗವಹಿಸುವರು. ಪತ್ರಕರ್ತ ಮುದಸ್ಸಿರ್ ಅಹಮದ್, ಪತ್ರಿಕಾ ವಿತರಕ ಮಾಲತೇಶ್‌ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ವಿವರ ನೀಡಿದರು.

ವರದಿಗಾರಿಕೆಯ ಕಾರ್ಯಾಗಾರ:

ಯುನಿಸೆಫ್, ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಂವಹನ ವಿಭಾಗ, ಕುವೆಂಪು ವಿಶ್ವ ವಿದ್ಯಾಲಯ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಜುಲೈ 12ರಂದು ಸರ್ಕಾರಿ ನೌಕರರ ಭವನದಲ್ಲಿ ಬೆಳಿಗ್ಗೆ 9.30ಕ್ಕೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಆಯ್ದ 40 ಪತ್ರಕರ್ತರಿಗೆ ಅಭಿವೃದ್ಧಿ ಪತ್ರಿಕೋದ್ಯಮ ಹಾಗೂ ಹದಿಹರೆಯದ ಸಮಸ್ಯೆಗಳ ವರದಿಗಾರಿಕೆ ಕುರಿತ ಈ ಕಾರ್ಯಾಗಾರವನ್ನು ಕುವೆಂಪು ವಿಶ್ವ ವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಎಸ್.ಎಸ್.ಪಾಟೀಲ್ ಉದ್ಘಾಟಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ, ರಾಜ್ಯ ಸಮಿತಿ ಸದಸ್ಯ ಎನ್‌.ರವಿಕುಮಾರ್, ಕುವೆಂಪು ವಿವಿ ಸಾರ್ವಜನಿಕ ಸಂಪರ್ಕಾಧಿಕಾರಿ ಸತ್ಯಪ್ರಕಾಶ್‌ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ, ಹೈದರಾಬಾದ್‌ನ ಯುನೆಸೆಫ್ ದಕ್ಷಿಣ ಭಾರತ ನಿರ್ದೇಶಕ ಪ್ರಪುಲ್ ಸೇನ್,ಕೇಂದ್ರ ಮಕ್ಕಳ ಹಕ್ಕು ಆಯೋಗದ ಕಾರ್ಯನಿರ್ವಹಾಕ ನಿರ್ದೇಶಕ ವಾಸುದೇವ ಶರ್ಮ, ಪತ್ರಕರ್ತೆ ಪ್ರೀತಿ ನಾಗರಾಜ್, ಮನಃಶಾಸ್ತ್ರಜ್ಞರಾದ ಡಾ.ಕೆ.ಎಸ್.ಶುಭ್ರತಾ, ಮೈಸೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಲಿ ಡಾ.ಸಪ್ನಾ ಭಾಗವಹಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ, ರಾಜ್ಯ ಸಮಿತಿ ನಿರ್ದೇಶಕ ಎನ್.ರವಿಕುಮಾರ್, ನಗರ ಕಾರ್ಯದರ್ಶಿ ವಿ.ಟಿ. ಅರುಣ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT