ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವಸ್ತುಗಳ ಮಾರಾಟ; ಜೈ ಭೀಮ್ ಪ್ರತಿಭಟನೆ

Last Updated 18 ಜುಲೈ 2019, 19:38 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಹೆಚ್ಚಾಗುತ್ತಿದೆ. ಇಂತಹ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಜೈ ಭೀಮ್ ಕನ್ನಡ ಸೈನ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಜೀವನಕ್ಕೆ ಮಾರಕವಾಗುತ್ತಿರುವ ಇಂತಹ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಿಸಬೇಕು. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಮಾರಾಟ, ಸರಬರಾಜು ನಡೆಯುತ್ತಿದೆ. ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಹೊರ ರಾಜ್ಯಗಳಿಂದ ಬಂದ ಕಾಲೇಜು ವಿದ್ಯಾರ್ಥಿಗಳು ಮಧ್ಯವರ್ತಿಗಳ ಮೂಲಕ ಗಾಂಜಾ ಮಾರಾಟದಲ್ಲಿ ಭಾಗಿಯಾಗಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗಳ ಬದುಕು ಹಾಳು ಮಾಡುತ್ತಿದ್ದಾರೆ ಎಂದು ದೂರಿದರು.

ಮಾದಕ ವ್ಯಸನ ಹೆಚ್ಚುತ್ತಿದೆ. ಪೋಷಕರು ಕಂಗಾಲಾಗಿದ್ದಾರೆ.ಮಾದಕ ವ್ಯಸನಿ ವಿದ್ಯಾರ್ಥಿಗಳು ಹೆಣ್ಣುಮಕ್ಕಳಿಗೆ ಚುಡಾಯಿಸುವುದು ಮತ್ತಿತರ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾರೆ. ಅಪರಾಧ ಚಟುವಟಿಕೆ ಹೆಚ್ಚಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಮಾದಕ ಪದಾರ್ಥಗಳ ಸೇವನೆ ವಿರುದ್ಧ ಜಾಗೃತಿ ಮೂಡಿಸಬೇಕು. ಜಿಲ್ಲಾಡಳಿತ, ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಮುಖಂಡರಾದ ಎಸ್.ಎಸ್. ಮಂಜುನಾಥ್, ಎಂ.ಪಿ. ವೆಂಕಟೇಶ್, ಭರತ್ ಕುಮಾರ್, ಅರುಣ್ ಕುಮಾರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT