ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದಾಧಿಕಾರಿಗಳ ಅಧ್ಯಯನ ಶಿಬಿರ

ಸೆ.13 ರಿಂದ 15ರ ವರೆಗೆ ಆಯೋಜನೆ
Last Updated 6 ಸೆಪ್ಟೆಂಬರ್ 2019, 9:12 IST
ಅಕ್ಷರ ಗಾತ್ರ

ವಿಜಯಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲಾ ಸಮಿತಿಗಳ ಆಶ್ರಯದಲ್ಲಿ ಆಲಮಟ್ಟಿಯ ಹರ್ಡೇಕರ್ ಮಂಜಪ್ಪ ಸ್ಮಾರಕ ಭವನದಲ್ಲಿ ಸೆ.13 ರಿಂದ 15ರ ವರೆಗೆ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರವನ್ನು ಆಯೋಜಿಸಲಾಗಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ.ಸಾಗರ, ‘ಅಂದು ಬೆಳಿಗ್ಗೆ 11 ಗಂಟೆಗೆ ಸಾಹಿತಿ ಡಾ.ಸಿದ್ಧಲಿಂಗಯ್ಯ ಉದ್ಘಾಟಿಸುವರು. ಕಲಬುರ್ಗಿಯ ಸಿದ್ಧಾರ್ಥ ಬುದ್ಧ ವಿಹಾರದ ಸಂಗಾನಂದ ಭಂತೇಜಿ ಸಾನ್ನಿಧ್ಯ ಹಾಗೂ ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸುವರು’ ಎಂದರು.

‘ಅಂದು ಮಧ್ಯಾಹ್ನ 3 ಗಂಟೆಗೆ ‘ಕರಾದಸಂಸ ಪದಾಧಿಕಾರಿಗಳ ಕರ್ತವ್ಯ ಹಾಗೂ ದಸಂಸ ಹುಟ್ಟು ಮತ್ತು ಬೆಳವಣಿಗೆ’ ಕುರಿತು ಡಿ.ಜಿ.ಸಾಗರ, ಸಂಜೆ 5.30 ಗಂಟೆಗೆ ‘ಪ್ರಸ್ತುತ ಆರ್ಥಿಕ ನೀತಿ ಮತ್ತು ದಲಿತರ ಭವಿಷ್ಯ’ ಕುರಿತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರೊ.ಸಂಜೀವಕುಮಾರ್ ವಿಷಯ ಮಂಡಿಸುವರು’ ಎಂದು ತಿಳಿಸಿದರು.

‘ಸೆ.14ರಂದು ಬೆಳಿಗ್ಗೆ 9 ಗಂಟೆಗೆ ‘ಪ್ರಜಾಪ್ರಭುತ್ವ–ಜಾತ್ಯತೀತ ವ್ಯವಸ್ಥೆ, ಬಲಪಡಿಸುವ ಅವಶ್ಯಕತೆ’ ಕುರಿತು ಪ್ರಗತಿಪರ ಚಿಂತಕ ಪ್ರೊ.ಎಚ್.ಎಂ.ರುದ್ರಸ್ವಾಮಿ, ಬೆಳಿಗ್ಗೆ 11 ಗಂಟೆಗೆ ‘ಜಾತಿವಾದಿಗಳ–ಕೋಮುವಾದಿಗಳ ಹುನ್ನಾರ’ ಕುರಿತು ಪ್ರಗತಿಪರ ಚಿಂತಕ ಪ್ರೊ.ಕೆ.ಸ್.ಭಗವಾನ್, ಮಧ್ಯಾಹ್ನ 12.30 ಗಂಟೆಗೆ ‘ದಲಿತ ಸಾಮಾಜಿಕ, ಆರ್ಥಿಕ ಸಮಸ್ಯೆಗಳು ಮತ್ತು ಪರಿಹಾರಗಳು’ ಕುರಿತು ಪ್ರಗತಿಪರ ಚಿಂತಕ ಪ್ರೊ.ಎಚ್.ಎಂ.ರುದ್ರಸ್ವಾಮಿ, ಮಧ್ಯಾಹ್ನ 2.30 ಗಂಟೆಗೆ ‘ಭಾರತದ ಸಂವಿಧಾನ ರಚನೆಯಲ್ಲಿ ಡಾ.ಅಂಬೇಡ್ಕರ್ ಅವರ ಪಾತ್ರ’ ಹಾಗೂ ಸಂಜೆ 4 ಗಂಟೆಗೆ ‘ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಗಳ ಪ್ರಸ್ತುತತೆ’ ಕುರಿತು ಕಲಬುರ್ಗಿಯ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಕಾಲೇಜಿನ ಪ್ರೊ.ವಿದ್ಯಾಸಾಗರ (ಈಶ್ವರ) ವಿಷಯ ಮಂಡಿಸುವರು’ ಎಂದು ಮಾಹಿತಿ ನೀಡಿದರು.

‘ಸೆ.15ರಂದು ಬೆಳಿಗ್ಗೆ 9 ಗಂಟೆಗೆ ‘ಸಾಮಾಜಿಕ ನ್ಯಾಯಪರ ಚಳವಳಿಗಳ ಮುಂದಿನ ಸವಾಲುಗಳು ಹಾಗೂ ಬಲಪಡಿಸುವ ಬಗೆ’ ಕುರಿತು ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ವಿಷಯ ಮಂಡಿಸುವರು. ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಮಾಜಿ ಶಾಸಕ ರಾಜು ಆಲಗೂರ ಸಮಾರೋಪ ಭಾಷಣ ಮಾಡುವರು’ ಎಂದು ತಿಳಿಸಿದರು.

‘ಪ್ರತಿ ದಿನ ಸಂಜೆ 7 ಗಂಟೆಗೆ ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ, ದಲಿತ ಕಲಾ ಮಂಡಳಿಯ ಸಂಚಾಲಕ ಪ್ರೊ.ಅಂಬಣ್ಣ ಜೀವಣಗಿ ಅವರು ಹೋರಾಟ ಹಾಡುಗಳನ್ನು ಪ್ರಸ್ತುತಪಡಿಸುವರು. ಪ್ರತಿ ನಿತ್ಯ ಬೆಳಿಗ್ಗೆ 7 ಗಂಟೆಗೆ ಕಾಶೀನಾಥ ಅವಟಿ ಯೋಗ ಶಿಕ್ಷಣ ನೀಡುವರು’ ಎಂದರು.

ರಾಜ್ಯ ಸಂಘಟನಾ ಸಂಚಾಲಕ ರಮೇಶ ಆಸಂಗಿ, ಜಿಲ್ಲಾ ಸಂಚಾಲಕ ವಿನಾಯಕ ಗುಣಸಾಗರ, ಜಿಲ್ಲಾ ಸಂಘಟನಾ ಸಂಚಾಲಕರಾದ ವೈ.ಸಿ.ಮಯೂರ, ಶರಣು ಸಿಂಧೆ, ರಮೇಶ ಧರಣಕರ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಶೋಕ ಚಲವಾದಿ, ನಗರ ಸಂಚಾಲಕ ಸಿದ್ದು ರಾಯಣ್ಣವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT