ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ವಸತಿ ಯೋಜನೆ ಪಟ್ಟಿಗೆ ಸಿಗದ ಅನುಮತಿ

ಹೋರಾಟಗಾರ ಕಲ್ಲೂರು ಮೇಘರಾಜ್ ದೂರು
Last Updated 1 ಅಕ್ಟೋಬರ್ 2019, 11:41 IST
ಅಕ್ಷರ ಗಾತ್ರ

ಶಿವಮೊಗ್ಗ: ಬಸವ ವಸತಿ ಯೋಜನೆ ಫಲಾನುಭವಿಗಳ ಪಟ್ಟಿಗೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.

ರಾಜ್ಯದಲ್ಲಿ 5,659 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬಸವ ವಸತಿ ಯೋಜನೆ ಅಡಿ ಆಯ್ಕೆ ಮಾಡಿದ 1,30,180 ಅರ್ಹ ಮಹಿಳಾ ವಸತಿ ರಹಿತರ ಪಟ್ಟಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅನುಮೋದನೆ ನೀಡಿಲ್ಲ. ಎಮಟು ತಿಂಗಳಿನಿಂದ ಹಾಗೆ ಇಟ್ಟುಕೊಂಡು ಕುಳಿತಿದ್ದಾರೆ. ಸರ್ಕಾರದ ಸಹಾಯಧನ 1,611 ಕೋಟಿ ಬಿಡುಗಡೆ ಮಾಡಿಲ್ಲ. ಇದು ಜನವಿರೋಧಿ ಕ್ರಮ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿದರು.

ಪ್ರತಿ ಗ್ರಾಪಂಗೆ 20ರಂತೆ 1,30,180 ಮನೆಗಳನ್ನು ಮಂಜೂರು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಮಹಿಳಾ ಫಲಾನುಭವಿಗಳ ಪಟ್ಟಿ ಅನುಮೋದನೆಗೆ ಕಳುಹಿಸಲಾಗಿದೆ ಎಂದರು.

ಎಂಟು ತಿಂಗಳಿಂದ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡದ ಪರಿಣಾಮ ಸಹಾಯಧನ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಸತಿ ಸಚಿವ ವಿ.ಸೋಮಣ್ಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ ಮುಖಂಡರಾದ ಜಿ.ಮಾದಪ್ಪ, ಹೊಳೆಮಡಿಲು ವೆಂಕಟೇಶ್, ಹೊನ್ನಮ್ಮ ಮಾಲತೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT