ಶಿವಮೊಗ್ಗ: ಮುಸ್ಲಿಂ ಸಮುದಾಯ ಟೀಕಿಸಿ, ಕೀಳಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜ.14ರ ಮಂಗಳವಾರ ಬೆಳಿಗ್ಗೆ 11ಕ್ಕೆಬಿಜೆಪಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ವಿರುದ್ಧಪ್ರತಿಭಟನೆ ಹಮ್ಮಿಕೊಂಡಿದೆ.

ಸೋಮಶೇಖರ ರೆಡ್ಡಿ ತಮ್ಮ ಶಾಸಕ ಸ್ಥಾನಕ್ಕೆ ಗೌರವ ತರುವಂತಹ ಮಾತನಾಡಬೇಕು.ಅವರಹೇಳಿಕೆ ಹಿಂದೂಮತ್ತು ಮುಸ್ಲಿಂಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವಂತಿದೆ.ಸಮಾಜದಲ್ಲಿ ಅಶಾಂತಿ ಕದಡುವ, ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವ ಇಂತಹ ಹೇಳಿಕೆ ಖಂಡನೀಯ ಎಂದುಘಟಕದ ಅಧ್ಯಕ್ಷಮಹಮ್ಮದ್ ಆರೀಫ್ ಉಲ್ಲಾಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಸೋಮಶೇಖರ ರೆಡ್ಡಿಬಂಧನಕ್ಕೆ ಆಗ್ರಹಿಸಿ ಜ.13ರಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಬಳ್ಳಾರಿಗೆ ತೆರಳಿ ಸೋಮಶೇಖರ ರೆಡ್ಡಿ ಮನೆಯ ಮುಂದೆ ಧರಣಿ ನಡೆಸಲಾಗುವುದು. 14ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲಾಗುವುದುಎಂದು ವಿವರ ನೀಡಿದರು.

ಅಲ್ಪಸಂಖ್ಯಾತರ ಘಟಕದ ನಗರ ಅಧ್ಯಕ್ಷ ಮಹಮದ್ ನಿಹಾಲ್ ಮಾತನಾಡಿ, ಸೋಮಶೇಖರ ರೆಡ್ಡಿಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ನಯಾಜ್ ಅಹಮದ್,ಆಸಿಫ್ ಮಸೂದ್, ಖಾಜಿ ಉಸ್ಮಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.