ಭಾನುವಾರ, ಫೆಬ್ರವರಿ 16, 2020
28 °C

ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣಗೆ ನಾಳೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟ ಫೆ.13ರಂದು ಸಂಜೆ 5.30ಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಸನ್ಮಾನ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ.

ಅಶ್ವತ್ಥನಾರಾಯಣ ಅವರು ಶಿವಮೊಗ್ಗದಲ್ಲಿ 8ರಿಂದ ಪಿಯುವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಆಗ ಅವರ ತಂದೆ ನಾರಾಯಪ್ಪ ಅವರು ಡಿಡಿಪಿಐ ಕಚೇರಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಥಮ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ನಗರಕ್ಕೆ ಬರುತ್ತಿದ್ದಾರೆ. ಅವರ ಸಹಪಾಠಿಗಳು, ಅಭಿಮಾನಿಗಳು ಸೇರಿ ಅಭಿನಂದಿಸಲಿದ್ದಾರೆ ಎಂದು ಒಕ್ಕೂಟದ ಮುಖಂಡ ಡಿ.ಮಂಜುನಾಥ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಸನ್ನನಾಥ ಸ್ವಾಮೀಜಿ ಸಮಾರಂಭದ ಸಾನಿಧ್ಯವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ, ಎಂ.ಜೆ.ಅಪ್ಪಾಜಿಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮೇಯರ್ ಸುವರ್ಣಾ ಶಂಕರ್, ಅಡಿಕೆ ವರ್ತಕ ಕಿಮ್ಮನೆ ಜಿ.ಜಯರಾಮ್, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಪ್ರತಿನಿಧಿ ಡಿ.ವಿ.ರಮೇಶ್, ಎಪಿಎಂಸಿ ಅಧ್ಯಕ್ಷ ಕೆ.ಪಿ. ದುಗ್ಗಪ್ಪಗೌಡ, ಪಾಲಿಕೆ ವಿರೋಧ ಪಕ್ಷದ ನಾಯಕ ಬಿ.ಎ. ರಮೇಶ್ ಹೆಗಡೆ ಉಪಸ್ಥಿತರಿರುವರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ಅಧ್ಯಕ್ಷತೆ ವಹಿಸುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ಬಿ.ಎಂ.ಸುಂದರೇಶ್, ಹರ್ಷಿತ್, ಎಸ್.ದೇವಾನಂದ, ಎಚ್.ಎಸ್.ವೆಂಕಟೇಶ್, ಶಿವರಾಮ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು