ಶಿವಮೊಗ್ಗ:ಮಲ್ಲೇಶ್ವರ ನಗರದ‘ಜಯಲಕ್ಷ್ಮೀ’ ಗೃಹದಲ್ಲಿಫೆ.16ರ ಬೆಳಿಗ್ಗೆ 10.30ಕ್ಕೆಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಅವರ ‘ಭೀಮರಥ ಶಾಂತಿ’ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ.

‘ಭೀಮರಥ' ಶಾಂತಿಯ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಕಲಸಿದ್ಧತೆಗಳು ನಡೆದಿವೆ. ಕುಟುಂಬದ ಸದಸ್ಯರು, ಬಂಧು-ಮಿತ್ರರು, ಧಾರ್ಮಿಕ ಮುಖಂಡರು, ರಾಜಕೀಯ ಕ್ಷೇತ್ರದ ಒಡನಾಡಿಗಳು, ಅಭಿಮಾನಿಗಳುದೇಶದ ವಿವಿಧ ಭಾಗಗಳಿಂದ ಆಗಮಿಸುವರುಎಂದು ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಂತ್ರಾಲಯದ ಸುಬುದೇಂದ್ರತೀರ್ಥ ಸ್ವಾಮೀಜಿ, ತರಳಬಾಳು ಡಾ.ಶಿವಮೂರ್ತಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ನಿರಂಜನಾನಂದಪುರಿ ಸ್ವಾಮೀಜಿ, ಆದಿಚುಂಚನಗಿರಿ ಡಾ.ನಿರ್ಮಲಾನಂದ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶಿವಮೊಗ್ಗದ ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಗೌರಿಗದ್ದೆ ದತ್ತಾಶ್ರಮದ ಅವಧೂತರಾದ ವಿನಯ ಗುರೂಜಿ, ಪಂಚಮಸಾಲಿ ಪೀಠದವಚನಾನಂದ ಸ್ವಾಮೀಜಿ, ಮಾದಾರ ಚೆನ್ನಯ್ಯ ಗುರುಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ, ಭಗೀರಥ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಆದಿಚುಂಚನಗಿರಿ ಪ್ರಸನ್ನನಾಥ ಸ್ವಾಮೀಜಿ, ಶಿವಮೊಗ್ಗ ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ, ಶಿವಮೊಗ್ಗ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿನಯಾನಂದ ಸರಸ್ವತಿ ಸ್ವಾಮೀಜಿ, ಕೌಲಗುಡ್ಡ ಸಿದ್ಧಾಶ್ರಮದ ಅಮರೇಶ್ವರ ಮಹಾರಾಜರು ಭಾಗವಹಿಸುವರು ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಮತ್ತು ಆರ್ಎಸ್ಎಸ್ ಹಿರಿಯ ಕ್ಷೇತ್ರ ಪ್ರಚಾರಕರಾದ ಸು.ರಾಮಣ್ಣ ಅವರುಉಪಸ್ಥಿತರಿರುವರು ಎಂದು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ಎಸ್.ಎನ್.ಚನ್ನಬಸಪ್ಪ, ಎಸ್.ಜ್ಞಾನೇಶ್ವರ್, ಬಿಜೆಪಿ ಮುಖಂಡರಾದ ಬಿ.ಆರ್. ಮಧುಸೂದನ್, ಹಿರಣ್ಣಯ್ಯ, ಕೆ.ವಿ. ಅಣ್ಣಪ್ಪ, ನಾಗರಾಜ್ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.