ಆದಿವಾಸಿಗಳ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹ

7

ಆದಿವಾಸಿಗಳ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹ

Published:
Updated:

ಶಿವಮೊಗ್ಗ: ರಾಜ್ಯದ ಆದಿವಾಸಿ, ಬಡಕಟ್ಟು ಸಮುದಾಯಗಳ ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕಾಯಂ ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಹ ಸಂಚಾಲಕ ಎಸ್.ವೈ. ಗುರುಶಾಂತ್ ಒತ್ತಾಯಿಸಿದರು.

2006ರ ಅರಣ್ಯ ಹಕ್ಕು ಕಾಯ್ದೆ ಅಡಿ ಭೂ ಮಂಜೂರಾತಿಗೆ ಅರ್ಜಿ ಸಲ್ಲಿಸಿರುವ ರಾಜ್ಯದ ಎಲ್ಲ ಬುಡಕಟ್ಟು ಜನರಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕು. ಅಂತಹ ಭೂಮಿಗೆ ಕೃಷಿ ಅಭಿವೃದ್ಧಿ ಬ್ಯಾಂಕ್ ಸಾಲ, ಸರ್ಕಾರದ ಸೌಲಭ್ಯ ಒದಗಿಸಬೇಕು. ಮನೆ ಕಟ್ಟಲು ನಿವೇಶನವೂ ಇಲ್ಲದೆ, ಮನೆಯೂ ಇಲ್ಲದೆ ಜೀತದ ಜೀವನ ಸಾಗಿಸುವಂತಹ ಪರಿಸ್ಥಿತಿ ಆದಿವಾಸಿಗಳು ಅನುಭವಿಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಅರಣ್ಯ ಹಕ್ಕು ಕಾಯ್ದೆಯಡಿ ಈಗಾಗಲೇ ವೈಯುಕ್ತಿಕ ಹಕ್ಕುಪತ್ರ ಪಡೆದಿರುವ ಹಕ್ಕುದಾರರಿಗೆ ಆರ್‌ಟಿಸಿ ಒದಗಿಸಬೇಕು. ಮೂಲಭೂತ ಸೌಲಭ್ಯ ಕಲ್ಪಿಸಬೇಕು.

ಭೂರಹಿತ ಆದಿವಾಸಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ, ಪ್ರತಿಯೊಬ್ಬರಿಗೂ ಕನಿಷ್ಠ 3 ಎಕರೆ ಕೃಷಿ ಯೋಗ್ಯ ಜಮೀನು ಮಂಜೂರು ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ ಆದಿವಾಸಿ ಅದಾಲತ್ ನಡೆಸುವುದರ ಮೂಲಕ ಆದಿವಾಸಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಧರನಾಡ, ಏಳಿಗೆ ನಾಗರಾಜ್, ಮಂಜುನಾಥ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !